ETV Bharat / city

ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ ಮಳೆಯ ಅಬ್ಬರ: ಹವಾಮಾನ ಇಲಾಖೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ(ಮಂಗಳವಾರ) ಮಳೆಯ ಅಬ್ಬರ ಇರಲಿದೆ. ನವೆಂಬರ್‌ 17ರ ಬಳಿಕ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ(Department of Meteorology) ತಿಳಿಸಿದೆ..

weather report
ಹವಾಮಾನ ಇಲಾಖೆ
author img

By

Published : Nov 15, 2021, 7:31 PM IST

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ(ಮಂಗಳವಾರ) ಮಳೆಯ ಅಬ್ಬರ ಇರಲಿದೆ. ನವೆಂಬರ್‌ 17ರ ಬಳಿಕ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (Department of Meteorology) ತಿಳಿಸಿದೆ.

ವಾಯುಭಾರ ಕುಸಿತದಿಂದ ತಮಿಳುನಾಡಿನ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆ ಆಗಿತ್ತು. ಇದೀಗ ವಾಯುಭಾರ ಕುಸಿತವಾಗಿದೆ. ಮಳೆಯೂ ತಗ್ಗುವ ಮುನ್ಸೂಚನೆ ಇದೆ.

ಆದರೆ, ಆಂಧ್ರಪ್ರದೇಶ, ಒಡಿಶಾ ಮೂಲಕ ಪಶ್ಚಿಮ ಬಂಗಾಳದ ತನಕ ಹಾದು ಹೋಗಿರುವ ಟ್ರಫ್‌ ಹಾಗೂ ಆಗ್ನೇಯ ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವ ರಾಜ್ಯದ ಮೇಲೂ ನವೆಂಬರ್‌ 16ರವರೆಗೆ ಇರಲಿದೆ ಎಂದು ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗಾಳಿ, ಸಿಡಿಲು, ಮಿಂಚು ಸಹಿತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.