ETV Bharat / city

ಆಗಸ್ಟ್ 22ರಂದು ಟಿಇಟಿ ಎಕ್ಸಾಂ- ಕೋವಿಡ್​ ನಿಯಮಗಳೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ

ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಅಂತಹ ಅಭ್ಯರ್ಥಿಗಳಿಗೆ ಪಲ್ಸ್ ಆಕ್ಸಿಮೀಟರ್ ಮೂಲಕ 'oxygen saturation' ಪರಿಶೀಲಿಸಲಾಗುತ್ತದೆ. ಕೋವಿಡ್ ಲಕ್ಷಣಗಳು ಇರುವ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಪ್ರತಿ ಕೇಂದ್ರದಲ್ಲಿ ಪ್ರತ್ಯೇಕವಾಗಿ ಕಾಯ್ದಿರಿಸಿದ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಡೆಸ್ಕ್­ನಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ..

author img

By

Published : Aug 20, 2021, 10:34 PM IST

well preparation for TET exam on August 22nd
ಆಗಸ್ಟ್ 22ರಂದು ಟಿಇಟಿ ಎಕ್ಸಾಂ

ಬೆಂಗಳೂರು : ಕೊರೊನಾ ಕಾಲಘಟ್ಟದಲ್ಲೂ ಯಶಸ್ವಿಯಾಗಿ ಹಲವು ಮುಖ್ಯ ಪರೀಕ್ಷೆಯನ್ನು ನಡೆಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಇದೀಗ ಟಿಇಟಿ ಪರೀಕ್ಷೆ ನಡೆಸಲು ತಯಾರಿ ನಡೆಸಿದೆ. ಆಗಸ್ಟ್ 22ರಂದು 34 ಡಿಸ್ಟ್ರಿಕ್ಟ್‌ ಹೆಡ್ ಕ್ವಾರ್ಟಸ್​​​ನಲ್ಲಿ ಪರೀಕ್ಷೆ ನಡೆಯಲಿದೆ.

ಒಂದೂವರೆ ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ನೋಂದಣಿ : 1-8ನೇ ತರಗತಿ ಶಿಕ್ಷಕರ ನೇಮಕಾತಿ ಅರ್ಹತೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ಪತ್ರಿಕೆಗೆ 1,03,267 ಮತ್ತು ಎರಡನೇ ಪತ್ರಿಕೆ 1,51,095 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮೊದಲ ಪತ್ರಿಕೆಗೆ 432 ಹಾಗೂ ಎರಡನೇ ಪತ್ರಿಕೆಗೆ 634 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯ ದಿನಾಂಕ-ಸಮಯ : ಮೊದಲ ಪತ್ರಿಕೆಯ ಪರೀಕ್ಷೆಯು 9:30ರಿಂದ 12ರ ತನಕ ಹಾಗೂ ಎರಡನೇ ಪರೀಕ್ಷೆಯು ಮಧ್ಯಾಹ್ನ 2:30ರಿಂದ 4ರ ತನಕ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕಿಂತ ಒಂದು ಗಂಟೆಯ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಪ್ರವೇಶ ಪತ್ರವಿಲ್ಲದ ಯಾವುದೇ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಸಂಬಂಧ ಯಾವುದೇ ವಿನಾಯಿತಿಯೂ ಇರುವುದಿಲ್ಲ. ಕೊರೊನಾ ಹಿನ್ನೆಲೆ ಎಸ್ಒಪಿ ಜಾರಿ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು : ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ ಉತ್ತೀರ್ಣರಾಗಿರಬೇಕು. ಹಾಗೂ 6-8ನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿಎಇಡಿ ಅಥವಾ ಬಿಎಸ್‌ಸಿ ಇಡಿಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆಯ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ ಅಥವಾ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಲು ಇಲಾಖೆ ಅವಕಾಶ ನೀಡಿತ್ತು.

ಕರ್ಫ್ಯೂದಿಂದ ವಿನಾಯಿತಿ : ಪರೀಕ್ಷೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ವೀಕೆಂಡ್ ಮತ್ತು ನೈಟ್ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ ಅಂತಾ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್ ಸೋಂಕು ಹೆಚ್ಚಾಗಿರುವ ಕೆಲವು ಜಿಲ್ಲೆಗಳಲ್ಲಿ ವೀಕೆಂಡ್ ಮತ್ತು ನೈಟ್ ಕರ್ಫ್ಯೂ ಜಾರಿಯಲ್ಲಿರುವ ಕಾರಣ ಟಿಇಟಿ ಪರೀಕ್ಷೆ ಬರೆಯುತ್ತಿರುವ ಕುರಿತು ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪೊಲೀಸ್ ಸಿಬ್ಬಂದಿಗೆ ತೋರಿಸಬಹುದು. ಅಭ್ಯರ್ಥಿಗಳಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲು ಈಗಾಗಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆಯೆಂದು ಮಾಹಿತಿ ನೀಡಿದ್ದಾರೆ.

ಸುರಕ್ಷತಾ ಕ್ರಮಗಳ ಪಾಲನೆ : ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾಡಳಿತಗಳ ಸಮನ್ವಯದೊಂದಿಗೆ ಸಂಪೂರ್ಣ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲಾಗುವುದು. ಎರಡೂ ಪತ್ರಿಕೆಗಳ ನಡುವಿನ ಅವಧಿಯಲ್ಲೂ ಅಭ್ಯರ್ಥಿಗಳು ಕುಳಿತುಕೊಳ್ಳುವ ಡೆಸ್ಕ್​​ಗಳನ್ನು ಸ್ಯಾನಿಟೈಸ್​​ ಮಾಡಲಾಗುತ್ತದೆ ಅಂತಾ ತಿಳಿಸಿದ್ದಾರೆ. ‌

ಸೂಕ್ತ ಆರೋಗ್ಯ ತಪಾಸಣಾ ವ್ಯವಸ್ಥೆ : ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದ ಬಳಿ ಆರೋಗ್ಯ ತಪಾಸಣಾ ಕೌಂಟರ್ ಇರಲಿದೆ. ಸಿಬ್ಬಂದಿ, ಅಭ್ಯರ್ಥಿಗಳಿಗೆ ಸೇರಿದಂತೆ ಪ್ರತಿಯೊಬ್ಬರನ್ನು ಸ್ಕ್ರೀನಿಂಗ್­ ಟೆಸ್ಟ್​​ಗೆ ಒಳಪಡಿಸಲಾಗುತ್ತದೆ. ಕೈಗಳನ್ನು ಸ್ಯಾನಿಟೈಸ್​​ ಮಾಡಲಾಗುತ್ತದೆ. ಅದಕ್ಕಾಗಿ ಆರೋಗ್ಯ ಇಲಾಖೆಯಿಂದ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿ ಅಥವಾ ಆಶಾ ಕಾರ್ಯಕರ್ತೆಯರನ್ನು ಅಥವಾ ಆರೋಗ್ಯ ತಪಾಸಣೆ ನಡೆಸಬಲ್ಲ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ.

ಪಲ್ಸ್ ಆಕ್ಸಿಮೀಟರ್, ಥರ್ಮಲ್ ಸ್ಕ್ಯಾನರ್ ಹಾಗೂ ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಸಿಬ್ಬಂದಿ ಹಾಜರಿರಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲರಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಅಭ್ಯರ್ಥಿಗಳ ನಡುವೆ ಕನಿಷ್ಟ 6 ಅಡಿ ಅಂತರ ಕಾಪಾಡುವಂತೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ನೆಗಟಿವ್ ರಿಪೋರ್ಟ್ ಕಡ್ಡಾಯ : ಕೇರಳ, ಮಹಾರಾಷ್ಟ್ರ ಸೇರಿದಂತೆ ಇನ್ನಿತರೆ ಹೊರ ರಾಜ್ಯಗಳಿಂದ ಪರೀಕ್ಷೆ ಬರೆಯಲು ಬರುವವರಿಗೆ RAT ಅಥವಾ RT-PCR ನೆಗೆಟಿವ್ (72 ತಾಸುಗಳ ಒಳಗೆ ಮಾಡಿಸಿರುವ) ವರದಿ ಕಡ್ಡಾಯಗೊಳಿಸಲಾಗಿದೆ.

ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಅಂತಹ ಅಭ್ಯರ್ಥಿಗಳಿಗೆ ಪಲ್ಸ್ ಆಕ್ಸಿಮೀಟರ್ ಮೂಲಕ 'oxygen saturation' ಪರಿಶೀಲಿಸಲಾಗುತ್ತದೆ. ಕೋವಿಡ್ ಲಕ್ಷಣಗಳು ಇರುವ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಪ್ರತಿ ಕೇಂದ್ರದಲ್ಲಿ ಪ್ರತ್ಯೇಕವಾಗಿ ಕಾಯ್ದಿರಿಸಿದ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಡೆಸ್ಕ್­ನಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.