ETV Bharat / city

ಈಶ್ವರಪ್ಪ ವಿರುದ್ಧ ಐದು ದಿನಗಳ ಪ್ರತಿಭಟನೆ ನಂತರ ಕಾಂಗ್ರೆಸ್ ಪಕ್ಷದ ಮುಂದಿನ ನಡೆ ಏನು ?

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಡಾ ಕೆ ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ ಅವರ ಮೇಲೆ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು, ಈಶ್ವರಪ್ಪ ಜೊತೆ ಮುಂಬರುವ ದಿನಗಳಲ್ಲಿ ಈ ನಾಯಕರ ವಿರುದ್ಧವೂ ಹೋರಾಟ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಚುನಾವಣಾ ವರ್ಷದಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಜನರ ಗಮನ ಸೆಳೆಯಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕರು, ತಮ್ಮ ಹೋರಾಟಗಳ ಮೂಲಕವೇ ಮುಂಬರುವ ದಿನಗಳಲ್ಲಿ ಜನರ ಗಮನ ಸೆಳೆದು ಅಧಿಕಾರಕ್ಕೆ ಬರುವ ಪ್ರಯತ್ನ ನಡೆಸಲು ತೀರ್ಮಾನಿಸಿದ್ದಾರೆ..

what-is-the-next-move-of-the-congress-after-five-days-of-protests-against-ishwarappa
ಈಶ್ವರಪ್ಪ ವಿರುದ್ಧ ಐದು ದಿನಗಳ ಪ್ರತಿಭಟನೆ ನಂತರ ಕಾಂಗ್ರೆಸ್ ಪಕ್ಷದ ಮುಂದಿನ ನಡೆ ಏನು ?
author img

By

Published : Apr 20, 2022, 12:10 PM IST

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಆದರೆ, ಈಶ್ವರಪ್ಪ ಬಂಧನದ ಜತೆಗೆ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಅಂತಾ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಕಾಂಗ್ರೆಸ್ಸಿಗೆ ನಿರೀಕ್ಷಿತ ಸಫಲತೆ ಸಿಕ್ಕಿಲ್ಲ.

ಈ ಹಿನ್ನೆಲೆ ರಾಜ್ಯಾದ್ಯಂತ ನಿರಂತರ ಐದು ದಿನಗಳ ಪ್ರತಿಭಟನೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಸರ್ಕಾರದಿಂದ ನಿರೀಕ್ಷಿತ ಪ್ರತಿಕ್ರಿಯೆ ಲಭಿಸಿಲ್ಲ. ಐದು ದಿನಗಳ ಪ್ರತಿಭಟನೆ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿಯೇ ಕಾಂಗ್ರೆಸ್ ನಾಯಕರು ಈಶ್ವರಪ್ಪ ವಿರುದ್ಧ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ತೀರ್ಮಾನ ಕೈಗೊಂಡಿದ್ದಾರೆ.

ವಾರದ ಹಿಂದೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿತ್ತು. ಹೋರಾಟವನ್ನು ಅಲ್ಲಿಗೆ ಕೈಬಿಡದ ಕೈ ನಾಯಕರು ವಿಧಾನಸೌಧಕ್ಕೆ ತೆರಳಿ ಅಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ಅಹೋರಾತ್ರಿ ಧರಣಿ ಕೈಗೊಂಡ ದಿನ ಸಾಯಂಕಾಲವೇ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದರು. ಆದರೆ, ನಾವು ಇವರ ರಾಜೀನಾಮೆಗೆ ತೃಪ್ತರಾಗುವುದಿಲ್ಲ.

ಅಮಾಯಕರ ಜೀವ ಬಲಿ ಪಡೆದಿರುವ ಈಶ್ವರಪ್ಪ ಬಂಧನ ಆಗಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರಾಜ್ಯ ಸರ್ಕಾರದ ಯಾವುದೇ ತನಿಖಾ ಸಂಸ್ಥೆಗಳಿಂದಲೂ ಪ್ರಾಮಾಣಿಕ ತನಿಖೆ ನಿರೀಕ್ಷಿಸಲು ಸಾಧ್ಯವಿಲ್ಲ. ಈ ಹಿನ್ನೆಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು.

ಮೃತ ಸಂತೋಷ್ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡುವ ಜೊತೆಗೆ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಸಂತೋಷ್ ನಡೆಸಿರುವ ಕಾಮಗಾರಿಯ ನಾಲ್ಕು ಕೋಟಿ ರೂಪಾಯಿ ಸಂಪೂರ್ಣ ಮೊತ್ತವನ್ನು ಸರ್ಕಾರ ಆದಷ್ಟು ಶೀಘ್ರ ಪಾವತಿ ಮಾಡಬೇಕು. ಇವೂ ಸೇರಿದಂತೆ ಕೆಲ ಬೇಡಿಕೆಗಳನ್ನು ಕಾಂಗ್ರೆಸ್ ಪಕ್ಷ ಮುಂದಿಟ್ಟಿದ್ದರೂ ಸರ್ಕಾರ ಇದಕ್ಕೆ ಯಾವುದೇ ರೀತಿಯಲ್ಲಿಯೂ ಸ್ಪಂದಿಸಿಲ್ಲ. ಇನ್ನೊಂದೆಡೆ ಕಾಂಗ್ರೆಸ್‌ ಹೋರಾಟಕ್ಕೆ ಹೆಚ್ಚಿನ ಒತ್ತು ಕೊಡದೆ ಖಾಲಿ ಇರುವ 5 ಸಚಿವ ಸ್ಥಾನಗಳ ಭರ್ತಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿದ್ಧತೆ ಆರಂಭಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹಸಿರು ನಿಶಾನೆ ನೀಡುವುದಕ್ಕೆ ಕಾಯುತ್ತಿರುವ ಬಸವರಾಜ ಬೊಮ್ಮಾಯಿ ಪಟ್ಟಿಯೊಂದಿಗೆ ದಿಲ್ಲಿಗೆ ತೆರಳಲು ಸಜ್ಜಾಗಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಹೋರಾಟವನ್ನು ಇನ್ನಷ್ಟು ಬಲಗೊಳಿಸುವ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ಸರ್ಕಾರದ ಈ ನಿರ್ಲಕ್ಷ ಸಹ ಪ್ರತಿಪಕ್ಷಕ್ಕೆ ಇರಿಸುಮುರುಸು ಉಂಟಾಗುವಂತೆ ಮಾಡಿದೆ. ಈ ಹಿನ್ನೆಲೆ ಹೋರಾಟವನ್ನು ಇನ್ನಷ್ಟು ಬಲಪಡಿಸಲು ಉದ್ದೇಶಿಸಿರುವ ಕಾಂಗ್ರೆಸ್ ನಾಯಕರು ಈಶ್ವರಪ್ಪ ಜೊತೆ ಸರ್ಕಾರದಲ್ಲಿ ಇನ್ನಷ್ಟು ಸಚಿವರು 40% ಕಮಿಷನ್ ಆಮಿಷ ಒಡ್ಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದು, ದಾಖಲೆಗಳನ್ನು ಬಿಡುಗಡೆ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಡಾ ಕೆ ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ ಅವರ ಮೇಲೆ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು, ಈಶ್ವರಪ್ಪ ಜೊತೆ ಮುಂಬರುವ ದಿನಗಳಲ್ಲಿ ಈ ನಾಯಕರ ವಿರುದ್ಧವೂ ಹೋರಾಟ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಚುನಾವಣಾ ವರ್ಷದಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಜನರ ಗಮನ ಸೆಳೆಯಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕರು, ತಮ್ಮ ಹೋರಾಟಗಳ ಮೂಲಕವೇ ಮುಂಬರುವ ದಿನಗಳಲ್ಲಿ ಜನರ ಗಮನ ಸೆಳೆದು ಅಧಿಕಾರಕ್ಕೆ ಬರುವ ಪ್ರಯತ್ನ ನಡೆಸಲು ತೀರ್ಮಾನಿಸಿದ್ದಾರೆ.

ಸರ್ಕಾರದ ವಿರುದ್ಧ ಜನಾಕ್ರೋಶ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಇದು ಕಾಂಗ್ರೆಸ್ಸಿಗೆ ಮತವಾಗಿ ಪರಿವರ್ತನೆಯಾಗಲಿದೆ. ನಾವು ಅಧಿಕಾರಕ್ಕೆ ಬರುವುದಕ್ಕೆ ಇದು ಸಹಕಾರ ಒದಗಿಸಲಿದೆ. ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲಬೇಕೆಂಬ ಗುರಿ ನೀಡಿದ್ದಾರೆ. ಇದರ ಜೊತೆಗೆ ಲೋಕಸಭೆಗೆ ಹೆಚ್ಚು ಸಂಸದರನ್ನು ಕಳಿಸಿಕೊಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರದ ಅರಾಜಕತೆಯನ್ನು ಜನರಿಗೆ ತಿಳಿಸುವ ಜೊತೆಗೆ ಭ್ರಷ್ಟಾಚಾರ ಮತ್ತು ಜನರ ಹಣವನ್ನು ವ್ಯರ್ಥ ಮಾಡುತ್ತಿರುವ ವಿಚಾರವಾಗಿ ಗಮನಸೆಳೆಯಲು ತೀರ್ಮಾನಿಸಿದ್ದೇವೆ.

ಇದರ ಜೊತೆಗೆ ರಾಜ್ಯದಲ್ಲಿ ನಾವು ಅಧಿಕಾರ ನಡೆಸಿದ ಸಂದರ್ಭ ಕೈಗೊಂಡ ಜನಪ್ರಿಯ ಕಾರ್ಯಕ್ರಮಗಳ ಕುರಿತು ಸಹ ಮನವರಿಕೆ ಮಾಡಿಕೊಡಲು ನಿರ್ಧರಿಸಿದ್ದೇವೆ. ಮುಂಬರುವ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ನಿರಂತರ ಪ್ರವಾಸ ಕೈಗೊಂಡು ಜನರ ನಡುವೆಯೇ ಇದ್ದು ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯ ಮಾಡಲಿದ್ದಾರೆ ಎಂದು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.

ಓದಿ : 2023 ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ: ಬಿಎಸ್​ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.