ಬೆಂಗಳೂರು: ಅಯೋಧ್ಯೆ ವಿವಾದ ಪ್ರಕರಣ ಕುರಿತು ತೀರ್ಪು ಪ್ರಕಟ ಹಿನ್ನೆಲೆ ಶಾಂತಿ, ಸಾಮರಸ್ಯ ಕಾಪಾಡುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
![Whatever the verdict is, maintain peace: CM tweeted](https://etvbharatimages.akamaized.net/etvbharat/prod-images/5007916_thum.jpg)
ಶತಮಾನದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ. 'ತೀರ್ಪು ಏನೇ ಆಗಿರಲಿ ಶಾಂತಿ- ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ' ಎಂದು ಟ್ವೀಟ್ ಮೂಲಕ ಸಿಎಂ ಮನವಿ ಮಾಡಿದ್ದಾರೆ.
ಇನ್ನು ಅಯೋಧ್ಯೆ ತೀರ್ಪು ಹಿನ್ನೆಲೆ ಸಿಎಂ ನಿವಾಸಕ್ಕೆ ಗುಪ್ತಚರ ಇಲಾಖೆಯ ಎಡಿಜಿಪಿ ಕಮಲ್ ಪಂತ್ ಭೇಟಿ ನೀಡಿ, ಬಿಎಸ್‌ವೈ ಜೊತೆ ಚರ್ಚೆ ನಡೆಸಿದರು.