ETV Bharat / city

ಬೆಂಗಳೂರು ಗಲಭೆ ಪ್ರಕರಣ ಸಿಬಿಐ-ಎನ್ಐಎಗೆ ವಹಿಸಲ್ಲ, ಗಲಭೆಕೋರರಿಂದಲೇ ನಷ್ಟದ ಹಣ ವಸೂಲಿ: ಬೊಮ್ಮಾಯಿ - ಡಿಜೆ ಹಳ್ಳಿ ಗಲಭೆ ಪ್ರಕರಣ

ಬೆಂಗಳೂರು ಗಲಭೆ ಪ್ರಕರಣವನ್ನು ರಾಜ್ಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಸಿಬಿಐ, ಎನ್​ಐಎಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

will-not-transfer-dj-village-riot-case-to-cbi-nia
ಗೃಹ ಸಚಿವ ಬೊಮ್ಮಾಯಿ
author img

By

Published : Aug 17, 2020, 3:27 PM IST

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ಸಿಬಿಐ ಸೇರಿದಂತೆ ಬೇರೆ ಯಾವುದೇ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ. ನಮ್ಮ ಪೊಲೀಸರೇ ತನಿಖೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವ ಪ್ರಸ್ತಾಪವಿಲ್ಲ. ಗೋಲಿಬಾರ್ ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಅವರು ತನಿಖೆ ನಡೆಸಲಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸ್ ಇಲಾಖೆ ಮಾಡುತ್ತಿದೆ. ಸದ್ಯಕ್ಕೆ ಇವೆರಡೇ ತನಿಖೆಗಳಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಬೆಂಗಳೂರು ಗಲಭೆ ಪ್ರಕರಣ ಸಿಬಿಐ, ಎನ್ಐಎಗೆ ವಹಿಸಲ್ಲ

ದುಷ್ಕರ್ಮಿಗಳಿಂದ‌ ನಷ್ಟ ವಸೂಲಿ

ದಂಗೆಗೆ ಕಾರಣವಾದವರಿಂದ ಆಸ್ತಿ-ಪಾಸ್ತಿ ನಷ್ಟವನ್ನು ವಸೂಲಿ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಅದಕ್ಕಾಗಿ ಕ್ಲೈಂ ಕಮಿಷನರ್ ನೇಮಕಕ್ಕೆ ಹೈಕೋರ್ಟ್​ನಿಂದ ಅನುಮತಿ ಬೇಕಾಗಿದ್ದು, ಅನುಮತಿ ಪಡೆದುಕೊಳ್ಳುತ್ತೇವೆ. ಕಾನೂನು ಬಾಹಿರ ಚಟುವಟಿಕೆಗಳ ನಿರ್ಬಂಧ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ. ಆ ನಿಟ್ಟಿನಲ್ಲಿಯೂ ಕ್ರಮ ವಹಿಸಲಾಗುತ್ತದೆ ಎಂದರು‌.

ಸರ್ಕಾರದ ತನಿಖೆ ಮಾತ್ರ ಅಧಿಕೃತ

ಕಾಂಗ್ರೆಸ್-ಬಿಜೆಪಿ ನಿಯೋಗದಿಂದ ಸತ್ಯ ಶೋಧನಾ ಸಮಿತಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಅವರಿಗೆ ಪ್ರಜಾಪ್ರಭುತ್ವದಲ್ಲಿ ಎಲ್ಲಾ ರೀತಿಯ ಅವಕಾಶ ಇದೆ. ಕಾನೂನಾತ್ಮಕವಾಗಿ ನಾವು ತನಿಖೆ ನಡೆಸುತ್ತಿದ್ದೇವೆ. ಇದು ಮಾತ್ರ ಅಧಿಕೃತ ಎಂದರು.

ಗೂಂಡಾ ಕಾಯ್ದೆಯಡಿ ಕೇಸ್

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪ್ರಕರಣದ ಬಗ್ಗೆ ಸಿಎಂ ಮಾಹಿತಿ ಪಡೆದುಕೊಂಡರು. ಮೂರು ಜನ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ನಿರ್ಧರಿಸಲಾಯಿತು. ಈ ಹಿಂದೆ ಈ ರೀತಿಯ ಘಟನೆಗಳಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಿ ಅವರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ. 300ಕ್ಕಿಂತ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನೂ ಕೆಲವರ ಬಂಧನ ಆಗಬೇಕಿದೆ. ಕೆಲವರು ನೇರವಾಗಿ ಭಾಗಿಯಾಗಿದ್ದರೆ, ಮತ್ತೆ ಕೆಲವರು ಪರೋಕ್ಷವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ತನಿಖೆ ನಡೆಯುತ್ತಿದೆ ಎಂದರು.

ಸಿಬಿಐ ತನಿಖೆ ಇಲ್ಲ

ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಬಗ್ಗೆ ಚರ್ಚೆಯಾಗಿಲ್ಲ. ಅದರ ಅಗತ್ಯತೆಯೂ ಕಂಡು ಬಂದಿಲ್ಲ. ಸಿಬಿಐ ತನಿಖೆ ಬಗ್ಗೆ ಚರ್ಚೆಯಾಗಿಲ್ಲ. ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ. ಗಲಭೆ ಪ್ರಕರಣದ ತನಿಖೆಯನ್ನು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ತಂಡ ನಡೆಸುತ್ತಿದೆ. ಇದರ ಹೊರತು ಬೇರೆ ಯಾವ ತಂಡವು ತನಿಖೆ ನಡೆಸುತ್ತಿಲ್ಲ. ಪ್ರಕರಣ ಇನ್ನೂ ತನಿಖೆ ಹಂತದಲ್ಲಿದ್ದು, ಯಾವ ಸಂಘಟನೆ ಸಂಪರ್ಕದಲ್ಲಿದೆ ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಲೇ ಇದರ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.