ETV Bharat / city

ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ 7 ಸಾವಿರಕ್ಕೂ ಹೆಚ್ಚು ಜನ ಟಿಕೆಟ್​ ರಹಿತ ಪ್ರಯಾಣ..! - ಬಸ್​ನಲ್ಲಿ ಟಕೆಟ್​ ರಹಿತ ಪ್ರಯಾಣಿಸಿದ ಜನಕ್ಕೆ ದಂಡ

ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ 7 ಸಾವಿರಕ್ಕೂ ಹೆಚ್ಚು ಜನ ಟಿಕೆಟ್​ ರಹಿತ ಪ್ರಯಾಣ ಮಾಡಿದ್ದು, ಪ್ರಯಾಣಿಕರಿಂದ ಭಾರಿ ಪ್ರಮಾಣದಲ್ಲಿ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ದಂಡ ವಸೂಲಿ ಮಾಡಿದೆ.

without ticket passengers detected in BMTC  without ticket passengers detected in KSRTC  without ticket passengers fines  BMTC and KSRTC buses fine news  ಬಸ್​ನಲ್ಲಿ ಟಕೆಟ್​ ರಹಿತ ಪ್ರಯಾಣಿಸಿದ ಜನಕ್ಕೆ ದಂಡ ವಿಧಿಸಿದ ಬಿಎಂಟಿಸಿ  ಬಸ್​ನಲ್ಲಿ ಟಕೆಟ್​ ರಹಿತ ಪ್ರಯಾಣಿಸಿದ ಜನಕ್ಕೆ ದಂಡ ವಿಧಿಸಿದ ಕೆಎಸ್​ಆರ್​ಟಿಸಿ  ಬಸ್​ನಲ್ಲಿ ಟಕೆಟ್​ ರಹಿತ ಪ್ರಯಾಣಿಸಿದ ಜನಕ್ಕೆ ದಂಡ  ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ದಂಡ ಸುದ್ದಿ
ಬಿಎಂಟಿಸಿ, ಕೆಎಸ್​ಆರ್​ಟಿಸಿ
author img

By

Published : Mar 15, 2022, 8:04 AM IST

Updated : Mar 15, 2022, 8:55 AM IST

ಬೆಂಗಳೂರು: ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಪತ್ತೆ ಹಚ್ಚಿ ದಂಡ ವಿಧಿಸಿದೆ. ಇನ್ನು ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ 7 ಸಾವಿರಕ್ಕೂ ಹೆಚ್ಚು ಜನ ಟಿಕೆಟ್​ ರಹಿತ ಪ್ರಯಾಣ ಮಾಡಿರುವುದು ಬೆಳಕಿಗೆ ಬಂದಿದೆ.

ಬಿಎಂಟಿಸಿ ದಂಡ: ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ತಡೆದು ಸಂಸ್ಥೆಯ ಆದಾಯ ಸೋರಿಕೆ ಕಡಿತಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ನಗರ ಸಾರಿಗೆ ಸಂಸ್ಥೆ ತಿಳಿಸಿದೆ.

ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಮಾ.22ಕ್ಕೆ ವಿಚಾರಣೆ

ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿದ ತನಿಖಾಧಿಕಾರಿಗಳು ಫೆಬ್ರವರಿ ತಿಂಗಳಿನಲ್ಲಿಯೇ ಒಟ್ಟು 27,503 ಟ್ರಿಪ್‌ಗಳನ್ನು ತಪಾಸಣೆ ನೆಡೆಸಿ 3,325 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದಾರೆ. ಅಷ್ಟೇ ಅಲ್ಲದೇ 4,91,141 ರೂ ದಂಡ ವಸೂಲಿ ಮಾಡಿದ್ದಾರೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1,942 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 228 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 22,800 ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 2022ರ ಫೆಬ್ರವರಿ ತಿಂಗಲಿನಲ್ಲೇ 3,553 ಪ್ರಯಾಣಿಕರಿಂದ ಒಟ್ಟು 5,13,941 ರೂ ದಂಡವನ್ನು ವಸೂಲಿ ಮಾಡಲಾಗಿದೆ. ದಂಡವನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94 ರ ಪ್ರಕಾರ ವಿಧಿಸಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಸಾರ್ವಜನಿಕರು ಸಹಕರಿಸಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ ಅಥವಾ ದಿನದ ಮಾಸಿಕ ಪಾಸುಗಳನ್ನು ಖರೀದಿಸಿ ಪ್ರಯಾಣಿಸುವುದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ.

ಓದಿ: ಹೈಕೋರ್ಟ್​ನಿಂದ ಹಿಜಾಬ್​ ಅಂತಿಮ ತೀರ್ಪು.. ಬೆಂಗಳೂರಲ್ಲಿ ಒಂದು ವಾರ 144 ಸೆಕ್ಷನ್ ಜಾರಿ

ಸಾರ್ವಜನಿಕರು ಸಹಕರಿಸುವುದರಿಂದ ಸಂಸ್ಥೆ ಉತ್ತಮ ಸೇವೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳನ್ನು ಪುರುಷ ಪ್ರಯಾಣಿಕರು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕು ಎಂದು ವಿನಂತಿಸಿದೆ.

ಕೆಎಸ್​ಆರ್​ಟಿಸಿ ದಂಡ ವಸೂಲಿ: ಫೆಬ್ರವರಿ ತಿಂಗಳೊಂದರಲ್ಲೇ ಟಿಕೆಟ್ ಇಲ್ಲದೇ ಪ್ರಯಾಣಿಸಿದ 3,784 ಪ್ರಯಾಣಿಕರನ್ನು ಪತ್ತೆ ಹಚ್ಚಿ 5.5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

2022 ರ ಫೆಬ್ರವರಿ ತಿಂಗಳಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ತಪಾಸಣೆ ನಡೆಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 45,726 ವಾಹನಗಳನ್ನು ತನಿಖೆ ಗೊಳಪಡಿಸಿದ್ದರು ಮತ್ತು 3, 298 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಓದಿ: 1998 ವಂಧಮಾ ಹತ್ಯಾಕಾಂಡ: ಆ ರಾತ್ರಿ ಮುಸುಕುಧಾರಿಗಳಿಂದ ನಡೆದಿತ್ತು 23 ಕಾಶ್ಮೀರಿ ಪಂಡಿತರ ನರಮೇಧ!

3,784 ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 5,50,491 ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದ್ದಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 74,300 ರೂ ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತಿನ ಕ್ರಮವನ್ನು ಈಗಾಗಲೇ ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಟಿಕೆಟ್ ಪಡೆದು ಪ್ರಯಾಣಿಸಿ: ಜನರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡುವಂತೆ ಪ್ರಯಾಣಿಕರಲ್ಲಿ ಸಾರಿಗೆ ನಿಗಮ ಮನವಿ ಮಾಡಿದೆ.

Last Updated : Mar 15, 2022, 8:55 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.