ಬೆಂಗಳೂರು: ಲಾಕ್ಡೌನ್ ನಡುವೆಯೇ ಬಿಇಎಂಎಲ್ ಕೆಲಸ ಆರಂಭಿಸಲು ಮುಂದಾದ ಹಿನ್ನೆಲೆಯಲ್ಲಿ ಬಿಇಎಂಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಅನುಮತಿ ಪಡೆಯದೇ ಬಿಇಎಂಎಲ್ ಕೆಲಸ ಆರಂಭಿಸುವ ತೀರ್ಮಾನವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ ಎಂದು ಬಿಇಎಂಎಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಶ್ರೀ ನಿವಾಸ್ ರೆಡ್ಡಿ ಆರೋಪಿಸಿದರು. ಬಿಇಎಂಎಲ್ ಆಡಳಿತ ಮಂಡಳಿ ನೌಕರರಿಗೆ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ನಗರ ಕೊರೊನಾ ಹಾಟ್ಸ್ಪಾಟ್ ಆಗಿದ್ದ ಹಿನ್ನೆಲೆ ಕೆಲಸ ಮಾಡುವುದು ಸುರಕ್ಷಿತವಲ್ಲ ಎಂದು ನೌಕರರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ,