ETV Bharat / city

ಇಡಿಯಿಂದ ಶಿಯೋಮಿ ಸಂಸ್ಥೆಯ ಬ್ಯಾಂಕ್ ಖಾತೆಗಳ ಮುಟ್ಟುಗೋಲು: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ - ಇಡಿಯಿಂದ ಶಓಮಿ ಸಂಸ್ಥೆಯ ಬ್ಯಾಂಕ್ ಖಾತೆಗಳ ಮುಟ್ಟುಗೋಲು

ಶಿಯೋಮಿ ಇಂಡಿಯಾ ಕಂಪನಿಯು ಭಾರತದಲ್ಲಿ ಗಳಿಸಿದ ಹಣವನ್ನು ರಾಯಧನ ನೀಡುವ ನೆಪದಲ್ಲಿ ವಿದೇಶಿ ಕಂಪನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡುತ್ತದೆ ಎಂದು ಇಡಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ-1999ರ ಅಡಿ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ.

High Court
ಹೈಕೋರ್ಟ್
author img

By

Published : May 23, 2022, 10:39 PM IST

ಬೆಂಗಳೂರು: ಶಿಯೋಮಿ ಇಂಡಿಯಾ ಕಂಪನಿಯ 4 ಬ್ಯಾಂಕ್‌ ಖಾತೆಗಳಲ್ಲಿರುವ 5,551 ಕೋಟಿ ರೂಪಾಯಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳುವ ಜಾರಿ ನಿರ್ದೇಶನಾಲಯದ (ಇಡಿ) ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮುಂದಿನ ವಿಚಾರಣೆವರೆಗೂ ವಿಸ್ತರಿಸಿದೆ. ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳು ಸಂಬಂಧ ಇಡಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಬೆಂಗಳೂರಿನ ಮಾರತಹಳ್ಳಿಯ ಟೆಕ್‌ ಗ್ರಾಮದಲ್ಲಿರುವ ಶಿಯೋಮಿ ಸಂಸ್ಥೆ ಪ್ರತಿನಿಧಿ ಸಮೀರ್‌ ಬಿ.ಎಸ್‌.ರಾವ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್‌.ಜಿ ಪಂಡಿತ್‌ ಅವರಿದ್ದ ಏಕಸದಸ್ಯ ಪೀಠ ಈ ತಡೆಯಾಜ್ಞೆ ವಿಸ್ತರಿಸಿದೆ.

ವಿಚಾರಣೆ ವೇಳೆ ಇಡಿ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಂ.ಬಿ.ನರಗುಂದ ವಾದಿಸಿ, ಶಿಯೋಮಿ ಕಂಪನಿಯವರು ನಿನ್ನೆಯಷ್ಟೇ ಆಕ್ಷೇಪಣೆ ಪ್ರತಿಯನ್ನು ಸಲ್ಲಿಸಿದ್ದಾರೆ. ಸುಮಾರು 350 ಪುಟಗಳಷ್ಟು ಪ್ರತಿಕ್ರಿಯೆ ಸಲ್ಲಿಸಿದ್ದು ಇನ್ನೂ ಪರಿಶೀಲಿಸಿಲ್ಲ ಎಂದು ತಿಳಿಸಿದರು. ಹೇಳಿಕೆ ಪರಿಗಣಿಸಿದ ಪೀಠ, ಈ ಹಿಂದಿನ ತಡೆಯಾಜ್ಞೆ ಆದೇಶವನ್ನು ಜೂನ್‌ 1ರವರೆಗೂ ವಿಸ್ತರಿಸಿತಲ್ಲದೇ, ವಿಚಾರಣೆಯನ್ನು ಜೂನ್‌ 1ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಶಿಯೋಮಿ ಇಂಡಿಯಾ ಕಂಪನಿಯು ಭಾರತದಲ್ಲಿ ಗಳಿಸಿದ ಹಣವನ್ನು ರಾಯಧನ ನೀಡುವ ನೆಪದಲ್ಲಿ ವಿದೇಶಿ ಕಂಪನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡುತ್ತಿದೆ. ಇದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ-1999ರ ನಿಯಮಗಳ ಉಲ್ಲಂಘನೆ ಎಂದು ಆರೋಪಿಸಿರುವ ಇಡಿ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. ಶಿಯೋಮಿ ಸಂಸ್ಥೆ ಇಡಿಯ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದೆ.

ಇದನ್ನೂ ಓದಿ: ಓದಲು ಕಷ್ಟವಾಗುತ್ತೆಂದು ಸೂಸೈಡ್ ಮಾಡಿಕೊಂಡ ವಿದೇಶಿ ಪ್ರಜೆ

ಇಡಿಯಿಂದ ಶಿಯೋಮಿ ಸಂಸ್ಥೆಯ ಬ್ಯಾಂಕ್ ಖಾತೆಗಳ ಮುಟ್ಟುಗೋಲು: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.