ಬೆಂಗಳೂರು: ಶಾಂತಿ, ಸೌಹಾರ್ದ ಮತ್ತು ಸಹಬಾಳ್ವೆಯ ಪ್ರತೀಕವಾಗಿರುವ ಈದ್ ಉಲ್ ಫಿತರ್ ಹಬ್ಬವು ಬದುಕಿನಲ್ಲಿ ನೆಮ್ಮದಿ, ಸಂತೋಷ ತರಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.
ರಂಜಾನ್ ತಿಂಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಮನೆಯಲ್ಲೇ ಪ್ರಾರ್ಥನೆ ನಡೆಸಿ, ಮುನ್ನೆಚ್ಚರಿಕೆ ವಹಿಸಿ ಸಹಕರಿಸಿದ ಎಲ್ಲಾ ಮುಸಲ್ಮಾನ ಬಂಧುಗಳಿಗೆ ಅಭಿನಂದನೆಗಳು. ಈದ್ ಹಬ್ಬದ ಸಂದರ್ಭದಲ್ಲಿಯೂ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ.
ಕೋವಿಡ್-19ರ ವಿರುದ್ಧದ ಸಮರದಲ್ಲಿ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು. ಮತ್ತೊಮ್ಮೆ ಈದ್ ಹಬ್ಬದ ಶುಭಾಶಯಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.