ಬೆಂಗಳೂರು: ಪೂರ್ವ ಕರಾವಳಿಯಲ್ಲಿ ಉಂಟಾಗಿರುವ ಗುಲಾಬ್ ಚಂಡಮಾರುತದ ಹಿನ್ನೆಲೆ, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರಿನಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಿಶ್ವ ರೇಬೀಸ್ ದಿನ: ಇಂದಿನಿಂದ ಮೂರು ದಿನಗಳ ಕಾಲ ಉಚಿತ ಲಸಿಕೆ
ಮುಂದಿನ 2 ದಿನ ಮಳೆ:
ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ.