ಬೆಂಗಳೂರು : ವೀಕೆಂಡ್ನಲ್ಲಿ ಸ್ನೇಹಿತರೆಲ್ಲ ಸೇರಿ ಎಣ್ಣೆ ಪಾರ್ಟಿ ಮಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಅದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ ಕೆಂಗೇರಿ ನಿವಾಸಿ ಮಣಿ ಎಂಬಾತ ಕೆಂಗೇರಿ ಬಳಿಯ ಸ್ನೇಹಿತರ ರೂಮ್ನಲ್ಲಿ ಎಣ್ಣೆ ಪಾರ್ಟಿಗೆ ಹೋದ ವೇಳೆ ಸ್ನೇಹಿತರ ನಡುವೆ ಗಲಾಟೆ ನಡೆದು ಮಣಿಗೆ ಹೊಡೆದಿದ್ದಾರೆ. ನಂತರ ಗಲಾಟೆ ವಿಕೋಪಕ್ಕೆ ತಿರುಗಿ ಮಣಿ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮಣಿ ಸ್ನೇಹಿತರು ತಲೆಮರೆಸಿಕೊಂಡಿದ್ದಾರೆ. ಹೀಗಾಗಿ ಮಣಿ ಜೊತೆ ಯಾರೆಲ್ಲಾ ಪಾರ್ಟಿ ಮಾಡಿದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.