ETV Bharat / city

ಬೆಂಗಳೂರಲ್ಲಿ ಬೈಕ್​​ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಯುವತಿ ಸಾವು! - ಬೆಂಗಳೂರಿನ ಎಂ.ಜಿ.ರಸ್ತೆಯ ಗರುಡ ಮಾಲ್ ಬಳಿ ಅಪಘಾತ

ಬೈಕ್​​ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಸಹೋದರನ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಈ ಘಟನೆ ನಡೆದಿದೆ.

Young woman dies due to road accident at Bengaluru
ಬೈಕ್​​ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಯುವತಿ ಸಾವು
author img

By

Published : Jan 4, 2022, 1:08 PM IST

ಬೆಂಗಳೂರು: ಬೈಕ್​​ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಸಹೋದರನ ಸ್ಥಿತಿ ಗಂಭೀರವಾಗಿದೆ. ನಗರದ ಎಂ.ಜಿ.ರಸ್ತೆಯ ಗರುಡ ಮಾಲ್ ಬಳಿ ಈ ದುರ್ಘಟನೆ ನಡೆದಿದೆ.

ಬೈಕ್​​ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಯುವತಿ ಸಾವು

ಸಂಜನಾ ಪ್ರಿಯ(24) ಮೃತ ಯುವತಿ. ಇಂದು ಬೆಳ್ಳಗೆ ನಸುಕಿನ ವೇಳೆ ಎಂ.ಜಿ.ರಸ್ತೆಯ ಗರುಡ ಮಾಲ್ ಬಳಿ ಸಂಜನಾ ಪ್ರಿಯ ಹಾಗೂ ಆಕೆಯ ಸಹೋದರ ಬೈಕ್​​ನಲ್ಲಿ ಬರುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಬೈಕ್​​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆಕೆಯ ಸಹೋದರನಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಅಶೋಕನಗರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆಕಸ್ಮಿಕ ಬೆಂಕಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಮೆಕ್ಕೆಜೋಳ ತುಂಬಿದ ಲಾರಿ - VIDEO

ETV Bharat Logo

Copyright © 2025 Ushodaya Enterprises Pvt. Ltd., All Rights Reserved.