ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಭೇಟಿ ವೇಳೆ ವಿಧಾನಪರಿಷತ್ ಪ್ರತಿಪಕ್ಷ ನಾಯಕನಾಗಿ ಇಬ್ರಾಹಿಂ ಅವರನ್ನು ನೇಮಕ ಮಾಡಲು ಹೈಕಮಾಂಡ್ಗೆ ಮನವಿ ಮಾಡಿರುವ ಬಗ್ಗೆ ಮಾಹಿತಿ ನೀಡಿದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನ ತೆರವಾಗಲಿದ್ದು, ಆ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಜೊತೆಗೂ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮತ್ತೊಬ್ಬ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೆಸರೂ ಕೇಳಿ ಬರುತ್ತಿದೆ.
![Zameer ahmed meets CM Ibrahim on council opposition leader](https://etvbharatimages.akamaized.net/etvbharat/prod-images/kn-bng-13-jameer-cmibrahimmeet-script-7201951_31122021223225_3112f_1640970145_1091.jpg)
ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಹೈಕಮಾಂಡ್ಗೆ ವರದಿ ರವಾನಿಸಿದ ರಾಜ್ಯ ಬಿಜೆಪಿ