ETV Bharat / city

ತುರ್ತು ಸಂದರ್ಭಗಳಲ್ಲಿ ಮಾತ್ರ ಸಿಎಂಗೆ ಝೀರೋ ಟ್ರಾಫಿಕ್ ವ್ಯವಸ್ಥೆ : ಜಂಟಿ ಸಂಚಾರ ಆಯುಕ್ತ ರವಿಕಾಂತೇಗೌಡ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೆಲವು ವೇಳೆ ತುರ್ತು ವಾಹನಗಳಾದ ಆ್ಯಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು ಸಿಲುಕುವುದರಿಂದ ತಮಗೆ ನೋವು ಮತ್ತು ಮುಜುಗರ ಉಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ರದ್ದುಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು..

zero traffic cancellation order by traffic joint commissioner ravikanthe gowda
ಜಂಟಿ ಸಂಚಾರ ಆಯುಕ್ತ ರವಿಕಾಂತೇಗೌಡ ಆದೇಶ
author img

By

Published : Aug 14, 2021, 8:55 PM IST

ಬೆಂಗಳೂರು : ಝೀರೋ ಟ್ರಾಫಿಕ್ ನೀಡದಂತೆ ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಿದ್ದಲ್ಲಿ ಮಾತ್ರ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಕಲ್ಪಿಸಿವಂತೆ ಜಂಟಿ ಸಂಚಾರ ಪೊಲೀಸ್ ಆಯುಕ್ತರಾದ ರವಿಕಾಂತೇಗೌಡ ನಗರದ ಟ್ರಾಫಿಕ್ ಪೊಲೀಸರಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.

zero traffic cancellation order by traffic joint commissioner ravikanthe gowda
ಜಂಟಿ ಸಂಚಾರ ಆಯುಕ್ತ ರವಿಕಾಂತೇಗೌಡ ಆದೇಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ಬೆಂಗಳೂರು ನಗರದಲ್ಲಿ ಸಂಚರಿಸುವ ವೇಳೆ ತಮ್ಮ ವಾಹನಕ್ಕೆ ಝೀರೋ ಟ್ರಾಫಿಕ್ ನೀಡಬಾರದು. ಇದರಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತದೆ.

ಕೆಲವು ವೇಳೆ ತುರ್ತು ವಾಹನಗಳಾದ ಆ್ಯಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು ಸಿಲುಕುವುದರಿಂದ ತಮಗೆ ನೋವು ಮತ್ತು ಮುಜುಗರ ಉಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ರದ್ದುಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.

ಈ ಹಿನ್ನೆಲೆ ಎಲ್ಲಾ ಸಂಚಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳು ಸಂಚರಿಸುವ ವೇಳೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ರದ್ದುಗೊಳಿಸಿ ಆದೇಶಿಸಲಾಗಿದೆ. ಒಂದು ಜಂಕ್ಷನ್‌ನಿಂದ ಮತ್ತೊಂದು ಜಂಕ್ಷನ್‌ಗೆ ಸುಗಮ ಸಂಚಾರ ವ್ಯವಸ್ಥೆ ಮಾತ್ರ ಮುಖ್ಯಮಂತ್ರಿಗಳಿಗೆ ನೀಡುವಂತೆ ನಿರ್ದೇಶಿಸಲಾಗಿದೆ.

ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಿದ್ದಲ್ಲಿ ಮಾತ್ರ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಸೂಚಿಸಲಾಗಿದೆ ಎಂದು ಜಂಟಿ ಸಂಚಾರ ಆಯುಕ್ತ ಡಾ. ಬಿ ಆರ್ ರವಿಕಾಂತೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ:ಕೊಟ್ಟ ಮಾತಿನಂತೆ ಝೀರೋ ಟ್ರಾಫಿಕ್ ಇಲ್ಲದೇ ಸಂಚರಿಸಿದ ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.