ದಾವಣಗೆರೆ: ಹೊನ್ನಾಳಿ ತಾಲೂಕಿನ ಕುಳಗಟ್ಟೆ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ 103 ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಗ್ರಾಮ ಇದಾಗಿದೆ.
5,100 ಜನಸಂಖ್ಯೆ ಹೊಂದಿರುವ ಕುಳಕಟ್ಟೆ ಗ್ರಾಮದಲ್ಲಿ ಕೊರೊನಾ ಸೋಂಕಿನ ಲಕ್ಷಣಗಳನ್ನು ಹೊಂದಿದ್ದ 274 ಜನರ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ 103 ಜನರಿಗೆ ಸೋಂಕು ಪತ್ತೆಯಾಗಿದೆ.
ಕೋವಿಡ್ ನಿಂದಾಗಿ 4 ಜನರು ಸಹ ಸಾವನ್ನಪ್ಪಿದ್ದಾರೆ. 74 ಜನ ಗುಣಮುಖರಾಗಿದ್ದು, 25 ಜನ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರೂ ಕೂಡ ಎಚ್ಚೆತ್ತುಕೊಳ್ಳದ ಗ್ರಾಮಸ್ಥರು ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ.