ದಾವಣಗೆರೆ: ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಹಕ್ಕಿ ಜ್ವರ ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಸಾವಿರಾರು ಕೋಳಿಗಳನ್ನು ಗುಂಡಿಗೆ ಹಾಕಿ ಮುಚ್ಚಲಾಗಿದೆ.
ಅಭಿಷೇಕ್ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಕೋಳಿಗಳಿಗೆ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಆದ್ದರಿಂದ ಸುಮಾರು 9 ಸಾವಿರ ಕೋಳಿಗಳನ್ನು ಗುಂಡಿಗೆ ಹಾಕಿ ಸಜೀವವಾಗಿ ಮಣ್ಣು ಮಾಡಲಾಗಿದೆ.
ಕೋಳಿಗಳ ನಾಶಕ್ಕೆ ಜಿಲ್ಲಾ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಪಶು ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸುತ್ತಮುತ್ತಲಿನ ಕೋಳಿ ಫಾರಂಗಳಲ್ಲಿನ ಕೋಳಿಗಳನ್ನು ನಾಶಪಡಿಸಲಾಗುವುದು. ಬನ್ನಿಕೋಡು ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.