ದಾವಣಗೆರೆ: SSLC ಪರೀಕ್ಷೆಗೆ ಹೆದರಿ ಮನೆಯಲ್ಲೇ ಕುಳಿತಿದ್ದ ವಿದ್ಯಾರ್ಥಿನಿಯೋರ್ವಳ ಮನವೊಲಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಪರೀಕ್ಷೆ ಬರೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೆದರಿ ಮನೆಯಲ್ಲೇ ಕುಳಿತಿದ್ದಳು. ಈ ವಿಷಯ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಅವರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಆಕೆಗೆ ಧೈರ್ಯ ತುಂಬಿದರು.
ಬಳಿಕ ತಮ್ಮ ವಾಹನದಲ್ಲೇ ವಿದ್ಯಾರ್ಥಿನಿಯನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪರೀಕ್ಷೆ ಬರೆಸಿದ್ದಾರೆ.
ಇದನ್ನೂ ಓದಿ: SSLC ಪರೀಕ್ಷೆ ಬರೆಯುತ್ತಿದ್ದಾರೆ ಈ 60 ವರ್ಷದ ವೃದ್ಧ! ಕಾರಣ ಇಷ್ಟೇ?