ದಾವಣಗೆರೆ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿ ದೇವಸ್ಥಾನಗಳೂ ಸೇರಿದಂತೆ ಧಾರ್ಮಿಕ ಕ್ಷೇತ್ರಗಳನ್ನ ಬಂದ್ ಮಾಡಿಸಿದೆ. ಆದರೆ ಜಗಳೂರು ಶಾಸಕ ಮುಚ್ಚಿದ್ದ ದೇವಸ್ಥಾನದ ಬಾಗಿಲು ತೆರೆಸುವ ಮೂಲಕ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ.
ಬಿಜೆಪಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಅವರು ಪತ್ನಿ ಇಂದಿರಾ, ಪುತ್ರ ಅಜಯೇಂದ್ರ ಸಿಂಹ ಜೊತೆ ತೆರಳಿ ಜಗಳೂರು ತಾಲೂಕಿನ ಮಾಡ್ರಳ್ಳಿ ಗ್ರಾಮದ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು, ಶಾಸಕರ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯವಾ? ಎಂದು ಜನರು ಪ್ರಶ್ನಿಸಿದ್ದಾರೆ.
ಈ ಹಿಂದೆ ಕೊರೊನಾ ನಿಯಮ ಉಲ್ಲಂಘಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ನಂಜನಗೂಡಿನಲ್ಲಿ ಪೂಜೆ ಸಲ್ಲಿಸಿದ್ದರು.
ಓದಿ: ಲಾಕ್ಡೌನ್ ನಿಯಮ ಉಲ್ಲಂಘಿಸಿ ನಂಜುಂಡೇಶ್ವರನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ