ETV Bharat / city

ಬಿಟ್ ಕಾಯಿನ್​ ಪ್ರಕರಣದಲ್ಲಿ ಕಾಂಗ್ರೆಸ್​ನವರೇ ಭಾಗಿಯಾಗಿದ್ದಾರೆ: ಬಿ.ವೈ.ವಿಜಯೇಂದ್ರ ತಿರುಗೇಟು - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಿಟ್ ಕಾಯಿನ್ (Bitcoin) ಪ್ರಕರಣದಲ್ಲಿ ಬಿಜೆಪಿಯವರು ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್​ನವರು ರಾಜ್ಯದ ಜನತೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಆರೋಪಿಸಿದ್ದಾರೆ.

BY Vijayendra
ಬಿ.ವೈ.ವಿಜಯೇಂದ್ರ
author img

By

Published : Nov 11, 2021, 11:37 AM IST

ದಾವಣಗೆರೆ: ಬಿಟ್ ಕಾಯಿನ್ (Bitcoin) ಬಗ್ಗೆ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪ ಮಾಡಿ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಆರೋಪಿಸಿದ್ದಾರೆ.

ನಗರದಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್​ ಮಾಡುವ ಆರೋಪಗಳಲ್ಲಿ ಹುರುಳಿಲ್ಲ. ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ವಿಚಿತ್ರ ಎಂದರೆ, ಕಾಂಗ್ರೆಸ್ ಮುಖಂಡರೇ ಬಿಟ್ ಕಾಯಿನ್ (Bitcoin) ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದರು.

ದಾವಣಗೆರೆಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraja Bommai) ದೆಹಲಿಯಲ್ಲಿ ಈ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಯಾರೇ ಪ್ರಭಾವಿಗಳು ಭಾಗಿಯಾಗಿದ್ದರೂ ಅವರ ವಿರುದ್ಧ ತನಿಖೆ ನಡೆಸುಲಾಗುತ್ತದೆ ಎಂದು. ಆದರೆ, ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಜನತೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಬದಲಾವಣೆ:

ಸಿಎಂ ಬದಲಾವಣೆ ಸದ್ಯಕ್ಕಿಲ್ಲ. ಮುಂದಿನ ಚುನಾವಣೆವರೆಗೂ ಬೊಮ್ಮಯಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ವಿಚಾರದ ಕುರಿತು ಮಾತನಾಡುವ ಮೂಲಕ ಕಾಂಗ್ರೆಸ್ ಪಕ್ಷ ಪಿತೂರಿ ನಡೆಸುತ್ತಿದೆ ಅಷ್ಟೇ. ಈ ರೀತಿ ಹೇಳಿಕೆ‌ ಕೊಡುವ ಮೂಲಕ ಅಡಳಿತವನ್ನು ಕುಂಠಿತ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು‌.

ಮೀಸಲು ಬೇಡಿಕೆಗೆ ಸಿಎಂ ಸ್ಪಂದನೆ:

ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಸೇರಿದಂತೆ ಬಹುತೇಕ ಸಮಾಜಗಳ ಬೇಡಿಕೆ ಬಗ್ಗೆ ಸಿಎಂ ಅವರು ಸ್ಪಂದಿಸಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಸಮಾಜದ ಶ್ರೀಗಳು ಆತಂಕ ಪಡಬಾರದು. ಹಾನಗಲ್​ನಲ್ಲಿ ನಾವು ಸಾಕಷ್ಟು ಪ್ರಯತ್ನ ಮಾಡಿದರೂ ಜಯ ಸಿಕ್ಕಿಲ್ಲ ಎಂದರು.

ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ:

ಬಿಟ್ ಕಾಯಿನ್ (Bitcoin) ದಂಧೆಯಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಬಚಾವ್ ಆಗಲು ಅವಕಾಶವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Chief Minister Basavaraja Bommai) ಈಗಾಗಲೇ ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಪಕ್ಷಗಳು ಚುನಾವಣೆ ಮುಂದಿಟ್ಟುಕೊಂಡು ಈ ವಿಚಾರವನ್ನು ಎಳೆದು ತರುತ್ತಿದ್ದಾರೆ. ಚುನಾವಣೆ ಘೋಷಣೆಯಾಗಿದ್ದರಿಂದ ಮತದಾರರನ್ನು ತಪ್ಪು ದಾರಿಗೆ ಎಳೆಯುವ ಹುನ್ನಾರ ನಡೆದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ (B.Y Raghavendra) ದಾವಣಗೆರೆಯಲ್ಲಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.