ದಾವಣಗೆರೆ: ಕಾಂಗ್ರೆಸ್ ಪಕ್ಷದವರು ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ. ಹೀಗಾಗಿ, ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y.Vijayendra) ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾತನಾಡಿದ ಅವರು, 100ಕ್ಕೆ 100ರಷ್ಟು ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಿದೆ. ಕಾಂಗ್ರೆಸ್ನವರು ಮುಂದಿನ ಸಿಎಂ ಯಾರು ಎನ್ನುವ ಗೊಂದಲದಲ್ಲಿದ್ದಾರೆ. ಒಬ್ಬ ಮುಖಂಡ, ಮತ್ತೊಬ್ಬ ಮುಖಂಡನ ಕಾಲೆಳೆಯುವ ಕೆಲಸ ಮಾಡುತ್ತಿದ್ದಾರೆ. ಎಸ್ಸಿ, ಎಸ್ಟಿ, ಹಿಂದುಳಿದ ಸಮಾಜದ ಶಾಸಕರು ಹೆಚ್ಚು ಇರುವುದು ಬಿಜೆಪಿ ಪಕ್ಷದಲ್ಲೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಅಂಬೇಡ್ಕರ್, ಗಾಂಧಿ ತತ್ವಗಳನ್ನು ಕಾಂಗ್ರೆಸ್ನವರು ಗಾಳಿಗೆ ತೂರಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ, ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.