ದಾವಣಗೆರೆ: ಕಾಂಗ್ರೆಸ್ನಲ್ಲಿ ರಾಹುಲ್ ಗಾಂಧಿಯಿಂದ ಹಿಡಿದು ಎಲ್ಲರೂ ಬೇಲ್ ಮೇಲೆ ಹೊರಗೆ ಇದ್ದವರೇ ಇದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಪಾತಾಳಕ್ಕೆ ಹೋಗಿದೆ. ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ಸಚಿವರ ಮೇಲೆ ಸುಳ್ಳು ಅಪಾದನೆ ಮಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ವಾಗ್ದಾಳಿ ನಡೆಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶದಲ್ಲಿ ಪಾತಾಳಕ್ಕೆ ಹೋಗಿದೆ, ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ಸಚಿವರ ಮೇಲೆ ಸುಳ್ಳು ಆಪಾದನೆ ಮಾಡುತ್ತಿದ್ದಾರೆ. ಅವರ ಕಡೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಆರೋಪ ಸಾಬೀತು ಮಾಡಲಿ. ಮಾಜಿ ಸಿಎಂ ಆಗಿದ್ದವರು ಹಾಗೂ ಕೆಪಿಸಿಸಿ ಅಧ್ಯಕ್ಷರು ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದರು.
ಕಾಂಗ್ರೆಸ್ನಲ್ಲಿ ರಾಹುಲ್ ಗಾಂಧಿಯಿಂದ ಹಿಡಿದು ಎಲ್ಲರೂ ಕೂಡ ಬೇಲ್ ಮೇಲೆ ಹೊರಗೆ ಇದ್ದಾರೆ. ಅವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇದೆಯೇ. ಕಾಂಗ್ರೆಸ್ ಪಕ್ಷದವರು ನೈತಿಕತೆ ಕಳೆದುಕೊಂಡಿದ್ದಾರೆ. ಸಿದ್ದರಾಮಯ್ಯ, ಕಾಂಗ್ರೆಸ್ನ ಅಧ್ಯಕ್ಷರು ಕೂಡ ಸುಳ್ಳಿನ ಅಪಾದನೆ ಮಾಡುತ್ತಿದ್ದಾರೆ ಎಂದು ದೂರಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ: ಸಂಪುಟ ವಿಸ್ತರಣೆ ಸಿಎಂ ಅವರ ಪರಮಾಧಿಕಾರ. ಮೇ ಹತ್ತಕ್ಕೆ ಸಿಎಂ ಬದಲಾವಣೆ ಎಂಬುದು ಊಹಾಪೋಹ ಅಷ್ಟೇ. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದರಿಸುತ್ತೇವೆ ಎಂದರು.
ಇದನ್ನೂ ಓದಿ: ಸರ್ಕಾರ ಬಿದ್ದರೂ ಪರ್ವಾಗಿಲ್ಲ ಕಿಂಗ್ ಪಿನ್ ಹೆಸರು ಹೇಳಿ: ಮಾಜಿ ಮುಖ್ಯಮಂತ್ರಿ HDKಗೆ ಆರಗ ಸವಾಲು