ETV Bharat / city

ಯುವತಿಯರಿಗೆ ಚುಡಾಯಿಸಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ: ಇಬ್ಬರಿಗೆ ಚಾಕು ಇರಿತ - davangere latest crime news

2 ಗುಂಪುಗಳ ನಡುವಿನ ಗಲಾಟೆ ವಿಕೋಪಕ್ಕೆ‌ ತಿರುಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

davangere
ಸಂತೆಬೆನ್ನೂರು ಪೊಲೀಸ್ ಠಾಣೆ
author img

By

Published : Jul 31, 2022, 10:24 AM IST

ದಾವಣಗೆರೆ: ಯುವತಿಯರಿಗೆ ಚುಡಾಯಿಸುತ್ತಿದ್ದರು ಎಂದು ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ‌ ತಿರುಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕರೆಕಟ್ಟೆ ಗ್ರಾಮದಲ್ಲಿ ನಿನ್ನೆ ನಡೆದಿದೆ. ಚಿರಡೋಣಿ ಗ್ರಾಮದ ದೇವೇಂದ್ರ ಹಾಗೂ ಸುನೀಲ್ ಚಾಕು ಇರಿತಕ್ಕೊಳಗಾದವರು.

ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಕೆಲ ಯುವಕರು ಹಾಗೂ ಕರೆಕಟ್ಟೆ ಗ್ರಾಮದ ಯುವಕರ ನಡುವೆ ಗಲಾಟೆ‌ಯಾಗಿದೆ. ರಾಘವೇಂದ್ರ ಎಂಬಾತ ಯುವಕರಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗ್ತಿದೆ. ಕೆರೆಕಟ್ಟೆಯಲ್ಲಿ ಶಾಲಾ ಮಟ್ಟದ ಸ್ಪೋರ್ಟ್ಸ್ ನಡೆಯುವಾಗ ಘಟನೆ ನಡೆದಿದೆ.

ಆರೋಪಿ ರಾಘವೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಕು ಇರಿತಕ್ಕೆ ಒಳಗಾದ ಇಬ್ಬರು ಯುವಕರಿಗೆ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 'ಕಳ್ಳ ಪೊಲೀಸ್​ ಆಟ'ದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಬಾಲಕನ ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.