ದಾವಣಗೆರೆ: ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಯಾರು ಯಾರು ಮಾತನಾಡಿದ್ದಾರೆ ಎಂಬುದನ್ನು ತನಿಖೆ ನಡೆಸುತ್ತೇವೆ. ಅವರು ಬಿಡುಗಡೆ ಮಾಡಿದ ಆಡಿಯೋದಲ್ಲಿ ಏನಿದೆ?. ಅದರಲ್ಲೇನೂ ಇಲ್ವಲ್ಲಾ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸೇರಿ ಹಲವರಿಂದ ಅಜ್ಞಾತಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ
ಪಿಎಸ್ಐ ನೇಮಕಾತಿಯಲ್ಲಿ ತನಿಖೆ ನಡೆಸಲು ಸಿಐಡಿಗೆ ಮುಕ್ತ ಅವಕಾಶ ನೀಡಿದ್ದೇವೆ. ತನಿಖೆ ವೇಳೆ ಯಾವುದೇ ಪಕ್ಷದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳುತ್ತೇವೆ. ಪರೀಕ್ಷಾ ಕೇಂದ್ರದಲ್ಲಿ ಅಕ್ರಮವೆಸಗಲು ಸಹಕಾರ ನೀಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಿಎಂ ಹೇಳಿದರು.
ಸಂಪುಟ ವಿಸ್ತರಣೆ ವಿಚಾರ ವರಿಷ್ಠರ ಜೊತೆ ಚರ್ಚೆ ಬಳಿಕ ನನಗೂ ಮಾಹಿತಿ ಸಿಗಲಿದೆ. ಸಂಪುಟದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಸಂಪುಟ ರಚನೆಯ ಬಳಿಕ ತಿಳಿಸುವೆ ಎಂದರು.
ದಾವಣಗೆರೆಯಲ್ಲಿ ಬೆಂಗಳೂರಿನ ಶಾಲೆಗಳಿಗೆ ಹುಸಿಬಾಂಬ್ ಕರೆ ವಿಚಾರವಾಗಿ ಮಾತನಾಡಿ, ಇ-ಮೇಲ್ಗಳು ಈ ಹಿಂದೆಯೂ ಬಂದಿವೆ. ಈ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಗಂಭೀರವಾದ ಕ್ರಮವಾಗಲಿದೆ ಎಂದು ತಿಳಿಸಿದರು.