ದಾವಣಗೆರೆ : ಬಸವರಾಜ ಬೊಮ್ಮಾಯಿಯವರಿಗೆ ಸಿಎಂ ಸ್ಥಾನ ಬಯಸದೇ ಬಂದ ಭಾಗ್ಯ. ಇನ್ನೂ ಒಂದೂವರೆ ವರ್ಷ ಬೊಮ್ಮಾಯಿ ಅವರ ಅಧಿಕಾರವಧಿ ಉಳಿದಿದೆ. ಇದನ್ನು ಅವರು ಪೂರ್ಣಗೊಳಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರು ಸಿಎಂ ಪರ ಬ್ಯಾಟ್ ಬೀಸಿದರು.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಆಯೋಜನೆಯಾಗಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಕಡಿಮೆ ಅವಧಿಯಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಿ ಹೆಸರು ಗಳಿಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಯಾದ ವೇಳೆ ಅವರು ಹಿಂದೂಗಳ ರಕ್ಷಣೆ ಮಾಡುತ್ತೇನೆ ಎಂದು ದಿಟ್ಟ ಹೇಳಿಕೆ ನೀಡಿದ್ದಾರೆ ಎಂದರು.
ಇದನ್ನೂ ಓದಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಮಾತ್ರವಲ್ಲ, ಸರ್ಕಾರವೇ ಹಳ್ಳಿಗಳ ಕಡೆಗೆ ಹೋಗಬೇಕು: CM ಬೊಮ್ಮಾಯಿ
ಅಷ್ಟೇ ಅಲ್ಲ, ಗ್ರಾಮೀಣ ಪ್ರದೇಶಕ್ಕೆ ಬೊಮ್ಮಾಯಿ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ರೂಪಾಯಿ ಹಣವನ್ನು ಗ್ರಾಮೀಣಾಭಿವೃದ್ಧಿಗಾಗಿ ಬಿಡುಗಡೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜನಾದೇಶ ಪಡೆಯಲಿದೆ ಎಂದು ಹೇಳಿದರು.
ಅಮೃತ ಗ್ರಾಮ ಪಂಚಾಯತ್ ಯೋಜನೆ ಘೋಷಿಸಿದ್ದು ಕೂಡ ಸಿಎಂ ಬೊಮ್ಮಾಯಿಯವರು. ಆರಂಭಿಕ ಹಂತದಲ್ಲಿ 750 ಅಮೃತ ಮಹಲ್ ಗ್ರಾಮಗಳಿಗೆ ತಲಾ 25 ಲಕ್ಷ ಅನುದಾನ ನೀಡಿದ್ದಾರೆ. ಮುಂದಿನ ವರ್ಷ 1,500 ಗ್ರಾಮಗಳಿಗೆ ಅಮೃತ ಯೋಜನೆ ವಿಸ್ತರಣೆಯಾಗಲಿದೆ ಎಂದು ಈಶ್ವರಪ್ಪ ಹೇಳಿದರು.