ETV Bharat / city

ಅ.16ರಂದು ದಾವಣಗೆರೆಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ : ಎಂ ಪಿ ರೇಣುಕಾಚಾರ್ಯ - ಎಂಪಿ ರೇಣುಕಾಚಾರ್ಯ

ಅಕ್ಟೋಬರ್​​ 16ರ ಬೆಳಗ್ಗೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ. ಹೊನ್ನಾಳಿ ತಾಲೂಕಿನ ಸುರಹೊನ್ನೆ ಗ್ರಾಮದಿಂದ ಗ್ರಾಮ ವಾಸ್ತವ್ಯಕ್ಕೆ ಚಾಲನೆ ದೊರೆಯಲ್ಲಿದೆ..

MP Renukacharya
ಎಂಪಿ ರೇಣುಕಾಚಾರ್ಯ
author img

By

Published : Oct 10, 2021, 10:52 PM IST

ದಾವಣಗೆರೆ : ಅ.16ರಂದು ದಾವಣಗೆರೆ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ಮಾಹಿತಿ ನೀಡಿದರು.

ಜಿಲ್ಲಾಡಳಿತದ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಸಿಎಂ.. ಈ ಬಗ್ಗೆ ಎಂ ಪಿ ರೇಣುಕಾಚಾರ್ಯ ಮಾಹಿತಿ ನೀಡಿರುವುದು..

ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ ಎಂದರು.

ಇಂದು ಹೊನ್ನಾಳಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್​​ ಬೀಳಗಿ ನೇತೃತ್ವದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು.

ಅಕ್ಟೋಬರ್​​ 16ರ ಬೆಳಗ್ಗೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ. ಹೊನ್ನಾಳಿ ತಾಲೂಕಿನ ಸುರಹೊನ್ನೆ ಗ್ರಾಮದಿಂದ ಗ್ರಾಮ ವಾಸ್ತವ್ಯಕ್ಕೆ ಚಾಲನೆ ದೊರೆಯಲಿದೆ ಎಂದು ಅವರು ತಿಳಿಸಿದರು.

ಆರ್. ಅಶೋಕ್, ಸಂಸದ ಜಿ.ಎಂ.‌ ಸಿದ್ದೇಶ್ವರ್ ಅವರಿಂದ ಚಾಲನೆ : ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಕಂದಾಯ ಸಚಿವ ಆರ್. ಅಶೋಕ್, ಸಂಸದ ಜಿ.ಎಂ.‌ ಸಿದ್ದೇಶ್ವರ್ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಹೊನ್ನಾಳಿ ಹೆಲಿಪ್ಯಾಡ್‌ನಲ್ಲಿ ಸಿಎಂ, ರಸ್ತೆ ಮಾರ್ಗವಾಗಿ ಕುಂದೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದಾರೆ.

ಎತ್ತಿನ ಗಾಡಿಯಲ್ಲಿ ಗ್ರಾಮಕ್ಕೆ ಪ್ರವೇಶಿಸಿ, ಗ್ರಾಮ ವಾಸ್ತವ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ನಂತರ ಸಿಎಂ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.