ದಾವಣಗೆರೆ : ಉತ್ತರ ಪ್ರದೇಶದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಂಡಿದೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಪಕ್ಷದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಜಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನಾವು ಬರುತ್ತೇವೆ. ಕನಿಷ್ಟ 150 ಕ್ಷೇತ್ರ ಗೆಲ್ಲಲೇಬೇಕು ಎಂಬ ಟಾರ್ಗೆಟ್ ಇದೆ. ಮತ್ತೆ ಸರ್ಕಾರ ತರುವುದು ನಮ್ಮಸಂಕಲ್ಪ ಎಂದಿದ್ದಾರೆ.
ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ. ಅವರ ನಾಯಕರೆಲ್ಲರೂ ತಬ್ಬಲಿಗಳಂತಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಉಸಿರಾಡುತ್ತಿದೆಯಷ್ಟೇ.. ಚುನಾವಣೆ ನಂತರ ಇಲ್ಲಿಯೂ ಕಾಂಗ್ರೆಸ್ ನೆಲಸಮವಾಗಲಿದೆ. ನಾವು 150 ಕ್ಷೇತ್ರ ಗೆದ್ದು ಮಾದರಿ ರಾಜ್ಯ ಮಾಡುತ್ತೇವೆ ಎಂದು ಬಿ ಎಸ್ ಯಡಿಯೂರಪ್ಪ ಭವಿಷ್ಯ ನುಡಿದರು.
ಇನ್ನೂ ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡು ನೆಲಸಮ ಆಗಲಿದೆ. ಮುಂದಿನ ದಿನಗಳಲ್ಲಿಯೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ನಾವು ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲಿದ್ದೇವೆ.
ಇನ್ನೂ ಬರದ ನಾಡು ಜಗಳೂರಿಗೆ ನೀರು ಹರಿಸಿದ್ದು ನಮ್ಮ ಸರ್ಕಾರ, ಇಲ್ಲಿಯ ಕೆರೆಗಳಿಗೆ ನೀರು ಹರಿಸಿ ಈ ಭಾಗದ ರೈತರಿಗೆ ಬೆನ್ನೆಲುಬಾಗಿ ನಮ್ಮ ಸರ್ಕಾರ ನಿಂತಿದೆ. ಇದರಿಂದ ಮತ್ತೊಮ್ಮೆ ಶಾಸಕರಾದ ಎಸ್.ವಿ.ರಾಮಚಂದ್ರಪ್ಪನವರನ್ನು ಗೆಲ್ಲಿಸಿ ಕಳಿಸಿ ಎಂದು ಜಗಳೂರು ಜನರಿಗೆ ಕರೆ ನೀಡಿದರು.
ಇದನ್ನೂ ಓದಿ: ಬಿಜೆಪಿ ಸರ್ಕಾರ ಹಗರಣಗಳ ಸರ್ಕಾರವಾಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ