ದಾವಣಗೆರೆ: ಬಂದೂಕು ಕ್ಲೀನ್ ಮಾಡುವಾಗ ಮಿಸ್ ಫೈರಿಂಗ್ ಆಗಿ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ದಾವಣಗೆರೆಯ ಡಿಆರ್ಆರ್ ಶಸ್ತ್ರಾಗಾರದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿ ಚೇತನ್ ಆರ್ (28) ಮೃತ ಪೊಲೀಸ್ ಕಾನ್ಸ್ಟೇಬಲ್. 2012ರ ಬ್ಯಾಚ್ನಲ್ಲಿ ಆಯ್ಕೆಯಾಗಿದ್ದ ಚೇತನ್ ಎಂದಿನಂತೆ ಇಂದು ಶಸ್ತ್ರಾಸ್ತ್ರ ಮೀಸಲು ಪಡೆಯಲ್ಲಿ ಬಂದೂಕುಗಳನ್ನು ಸ್ವಚ್ಛಗೊಳಿಸುತ್ತಿರುವಾಗ ಆಕಸ್ಮಿಕವಾಗಿ ಬಂದೂಕಿನಿಂದ ಹೊರಬಂದ ಗುಂಡು ಆತನ ಕತ್ತು ಸೀಳಿದೆ.
ಕೂಡಲೇ ಚೇತನ್ನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಗೆ ಪೂರ್ವ ವಲಯ ಐಜಿಪಿ ರವಿ.ಎಸ್ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮೈಸೂರು: ದರೋಡೆಕೋರರು ಹಾರಿಸಿದ ಗುಂಡಿಗೆ ಯುವಕ ಬಲಿ
ಚೇತನ್ ಕಳೆದ ಐದು ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಅವರಿಗೆ, ಐದು ವರ್ಷದ ಮಗುಯಿದೆ. ಸದ್ಯ ಚೇತನ್ ಹೆಂಡತಿ 9 ತಿಂಗಳ ಗರ್ಭಿಣಿಯಾಗಿದ್ದು, ಪತಿ ಅಗಲಿಕೆಯಿಂದ ಆಕೆ ಶೋಕಸಾಗರದಲ್ಲಿ ಮುಳುಗಿದ್ದಾಳೆ.