ದಾವಣಗೆರೆ: ಜಿಲ್ಲೆಯಲ್ಲಿಂದು 178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,387ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಮೂವರು ಕೊರೊನಾ ಬಲಿಯಾಗಿದ್ದು, ಮೃತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ತೀವ್ರ ಉಸಿರಾಟ ತೊಂದರೆ, ಕಫ ಹಾಗೂ ಜ್ವರದಿಂದ ಬಳಲುತ್ತಿದ್ದ 74 ವರ್ಷದ ವೃದ್ಧ, 70 ವರ್ಷದ ವೃದ್ಧೆ ಹಾಗೂ 45 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 31ರಂದು ಸಾವನ್ನಪ್ಪಿದ್ದಾರೆ.
ಇಂದು 89 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಇದುವರೆಗೆ 1,479 ಜನರು ಡಿಸ್ಚಾರ್ಜ್ ಆಗಿದ್ದಾರೆ. 853 ಸಕ್ರಿಯ ಪ್ರಕರಣಗಳಿವೆ.