ಹಾವೇರಿ/ದಾವಣಗೆರೆ: ಹಾವೇರಿ ಜಿಲ್ಲೆಯಲ್ಲಿ ಇಂದು 42 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,148ಕ್ಕೇರಿದೆ.
ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 107 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲಾಡಳಿತ ಮಂಗಳವಾರ ಎರಡು ಮರಣಗಳನ್ನ ದೃಢೀಕರಿಸಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಮರಣವನ್ನಪ್ಪಿದವರ ಸಂಖ್ಯೆ 184ಕ್ಕೇರಿದೆ.
ಹಾನಗಲ್ ತಾಲೂಕಿನಲ್ಲಿ 04, ಹಾವೇರಿ ತಾಲೂಕಿನಲ್ಲಿ 22, ರಾಣೆಬೆನ್ನೂರು ತಾಲೂಕಿನಲ್ಲಿ 15, ಶಿಗ್ಗಾವಿ ತಾಲೂಕಿನಲ್ಲಿ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ.
ಜಿಲ್ಲೆಯಲ್ಲಿ 364 ಜನ ಹೋಂ ಐಸೋಲೇಷನನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 107 ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 206 ಮಂದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 19,574ಕ್ಕೆ ಏರಿದೆ.
ದಾವಣಗೆರೆ 94, ಹರಿಹರ 40, ಜಗಳೂರು 13, ಚನ್ನಗಿರಿ 21, ಹೊನ್ನಾಳಿ 36 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಇಬ್ಬರಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಇಂದು 181 ಜನರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 18,269 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ದಾವಣಗೆರೆ 78, ಹರಿಹರ 41, ಜಗಳೂರ 9, ಚನ್ನಗಿರಿ 22, ಹೊನ್ನಾಳಿ 30 ಹಾಗೂ ಹೊರ ಜಿಲ್ಲೆಯ ಒಬ್ಬರು ಸಂಪೂರ್ಣವಾಗಿ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.
ಪ್ರಸ್ತುತ 1054 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ. 910 ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, 7439 ರಿಪೋರ್ಟ್ ಬರಬೇಕಿದೆ.