ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡು ಮನೆಗಳು ಹೊತ್ತಿ ಉರಿದ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ತೆಗ್ಗಿನಹಳ್ಳಿ ಗ್ರಾಮದಲ್ಲಿ ಜರುಗಿದೆ. ಘಟನೆಯಲ್ಲಿ ನರಸಪ್ಪ ಎಂಬವವರು ಗಾಯಗೊಂಡಿದ್ದು, ಎರಡು ಮನೆಗಳು ಸುಟ್ಟು ಕರಕಲಾಗಿವೆ.
ಟ್ರ್ಯಾಕ್ಟರ್ಗೆ ವೆಲ್ಡಿಂಗ್ ಮಾಡಲು ಮನೆಯಿಂದ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ಈ ವೇಳೆ ಕಿಡಿ ತಗುಲಿದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮನೆಗೆ ಬೆಂಕಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.