ದಾವಣಗೆರೆ: ಕಾರ್ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿ ನಡೆದಿದೆ. ಪ್ರಿಯಾಂಕಾ (26) ಸಾವನ್ನಪ್ಪಿದ್ದ ಗುಜರಾತ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ.
ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುವ ವೇಳೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಸಾವನಪ್ಪಿದ್ದಾಳೆ. ದಾವಣಗೆರೆ ನಗರದ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ವ್ಯಾಸಾಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಜರುಗಿದೆ. ಕೇರಳದ ಕೆಎಲ್ 02, BJ 8173 ನೋಂದಣಿ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಇದನ್ನೂ ಓದಿ: ಪ್ರೇಯಸಿಗೆ ಗಿಫ್ಟ್ ನೀಡಲು ಚಿನ್ನದ ಉಂಗುರ ಕದ್ದ ಪ್ರೇಮಿ.. ಸಿಸಿಟಿವಿಯಲ್ಲಿ ಭಾವಿ ವೈದ್ಯನ ಕೈಚಳಕ ಸೆರೆ)