ETV Bharat / city

ಕಾಂಗ್ರೆಸ್ ಮುಖಂಡನ ಹತ್ಯೆ, ಮೂವರು ಆರೋಪಿಗಳ ಬಂಧನ: ವಿವಾಹೇತರ ಸಂಬಂಧ ಕಾರಣ?

ಕೊಲೆಯಾದ ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದರು. ಇದಲ್ಲದೇ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

davanagere-murder-case-three-arrested
ಕಾಂಗ್ರೆಸ್ ಮುಖಂಡ ಹತ್ಯೆ, ಮೂವರು ಆರೋಪಿಗಳ ಬಂಧನ: ವಿವಾಹೇತರ ಸಂಬಂಧ ಕಾರಣ?
author img

By

Published : Sep 11, 2021, 1:07 PM IST

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಅವರದ್ದು ಕೊಲೆ ಎಂದು ಸಾಬೀತಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಸವಾಪಟ್ಟಣ ಠಾಣೆಯ ಪೋಲಿಸರು ಬಂಧಿಸಿದ್ದಾರೆ.

ಅಮ್ಜಾದ್ ಖಾನ್(44), ಇಸ್ಮಾಯಿಲ್ ಖಾನ್ (42), ನೂರ್ ಅಹ್ಮದ್ (36) ಬಂಧಿತರು. ಸೆಪ್ಟೆಂಬರ್ ಎರಡರಂದು ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್​ ಅವರ ಕೊಲೆ ನಡೆದಿತ್ತು. ಬಸವಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೊಲೆಗೆ ವಿವಾಹೇತರ ಸಂಬಂಧ ಕಾರಣ?

ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ನಿವಾಸಿಯಾದ ಜೈನುಲ್ಲಾ ಖಾನ್​​ ಅದೇ ಊರಿನ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಹೂತು ಹಾಕಲಾಗಿತ್ತು. ಈ ಕೊಲೆಗೆ ವಿವಾಹೇತರ ಸಂಬಂಧ ಕಾರಣ ಎಂದು ಹೇಳಲಾಗುತ್ತಿದೆ.

ಕೊಲೆಯಾದ ಜೈನುಲ್ಲಾ ಖಾನ್ ಆರೋಪಿ ಅಮ್ಜದ್ ಖಾನ್ ಪತ್ನಿ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರಂತೆ. ಈ ವಿಷಯ ಆರೋಪಿ ಅಮ್ಜದ್ ಖಾನ್ ಗಮನಕ್ಕೆ ಬಂದಿತ್ತು. ಹೀಗಾಗಿ ಸಹೋದರ ಇಸ್ಮಾಯಿಲ್ ಖಾನ್ ಹಾಗೂ ಸ್ನೇಹಿತ ನೂರ್ ಅಹ್ಮದ್ ಜೊತೆ ಸೇರಿ ಜೈನುಲ್ಲಾ ಖಾನ್​​ನನ್ನು ಮುಗಿಸಿದ್ದಾರೆ.

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದ ಜೈನುಲ್ಲಾ ಖಾನ್

ಕೊಲೆಯಾದ ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದರು. ಇದಲ್ಲದೇ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಒಂದು ವಾರದ ಹಿಂದೆ ಜೈನುಲ್ಲಾಖಾನ್​​ ನಾಪತ್ತೆ ಆಗಿದ್ದರು. ಉದ್ದೇಶಪೂರ್ವಕವಾಗಿ ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸದ್ಯ ಬಸವಾಪಟ್ಟಣದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ನಿಯಂತ್ರಣ ಸಿಗದೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಯುವಕ‌ ಸಾವು - CCTV VIDEO

ETV Bharat Logo

Copyright © 2024 Ushodaya Enterprises Pvt. Ltd., All Rights Reserved.