ದಾವಣಗೆರೆ: ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ತಾಲೂಕಿನ ತೋಳಹುಣಸೆ ಗ್ರಾಮದ ದಾವಣಗೆರೆ ವಿಶ್ವವಿದ್ಯಾನಿಲಯದ ಬಳಿ ನಡೆದಿದೆ.
ದಾವಣಗೆರೆ ವಿವಿಯಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ ಕುರ್ಕಿ ಗ್ರಾಮದ ಶೈಲಜಾ (23) ಮೃತಪಟ್ಟ ವಿದ್ಯಾರ್ಥಿನಿ ಎನ್ನಲಾಗಿದೆ. ಶೈಲಜಾ ತರಗತಿ ಮುಗಿಸಿ ತನ್ನ ಗ್ರಾಮಕ್ಕೆ ಹೋಗಲು ಬಸ್ ಹತ್ತಲೆಂದು ರಸ್ತೆ ದಾಟುವ ವೇಳೆ ಈ ಅಪಘಾತ ಸಂಭವಿಸಿದೆ.
ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.