ETV Bharat / city

ಇಂದು ದಾವಣಗೆರೆ ವಿವಿ 7ನೇ ಘಟಿಕೋತ್ಸವ: ಸರಳ ಕಾರ್ಯಕ್ರಮ ಆಯೋಜನೆ - ದಾವಣಗೆರೆ ವಿವಿ ಕುಲಪತಿ ಹಲಸೆ ಮಾಹಿತಿ

ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಸೇರಿದಂತೆ ಎಲ್ಲಾ ಸುರಕ್ಷಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮಾರಂಭವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಸ್ವರ್ಣ ಪದಕ ಪಡೆದ ವಿದ್ಯಾರ್ಥಿಗಳು, ಅವರ ಪೋಷಕರು, ಗಣ್ಯಮಾನ್ಯರು ಸೇರಿದಂತೆ ಗರಿಷ್ಟ 250 ಜನ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಕುಲಪತಿ ಹೇಳಿದರು

davanagere vv vc press meet
ವಿವಿ ಕುಲಪತಿ ಡಾ. ಎಸ್.ವಿ. ಹಲಸೆ ಸುದ್ದಿಗೋಷ್ಠಿ
author img

By

Published : Sep 30, 2020, 1:57 AM IST

Updated : Sep 30, 2020, 4:24 AM IST

ದಾವಣಗೆರೆ: 2018-19 ನೇ ಸಾಲಿನ ದಾವಣಗೆರೆ ವಿಶ್ವ ವಿದ್ಯಾಲಯದ ಏಳನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಇಂದು ವಿವಿ ಆವರಣದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ವಯ ಸರಳವಾಗಿ ಆಯೋಜಿಸಲಾಗುವುದು ಎಂದು ವಿವಿ ಕುಲಪತಿ ಡಾ. ಎಸ್.ವಿ. ಹಲಸೆ ಹೇಳಿದರು.

ದಾವಣಗೆರೆ ವಿವಿ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮ ಕುರಿತಂತೆ ವಿವಿ ಆವರಣದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಘಟಿಕೋತ್ಸವ ಸಮಾರಂಭದ ಅಂಗವಾಗಿ ರಾಜ್ಯಪಾಲರು ಹಾಗೂ ವಿವಿ ಕುಲಾಧಿಪತಿಗಳಾದ ವಜುಭಾಯಿ ವಾಲಾ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ವರ್ಚುವಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಘಟಿಕೋತ್ಸವಕ್ಕೆ ಸಂದೇಶ ನೀಡುವರು. ಅಲ್ಲದೆ ವಿಕ್ರಮ್ ಸಾರಾಭಾಯಿ, ಪ್ರೊಫೆಸರ್, ಇಸ್ರೋದ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್. ಕಿರಣ್ ಕುಮಾರ್ ಅವರೂ ಕೂಡ ವರ್ಚುವಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವದ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.

ವಿವಿ ಕುಲಪತಿ ಡಾ. ಎಸ್.ವಿ. ಹಲಸೆ ಸುದ್ದಿಗೋಷ್ಠಿ

ಕೋವಿಡ್ ನಿಯಂತ್ರಣ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಸೇರಿದಂತೆ ಎಲ್ಲಾ ಸುರಕ್ಷಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮಾರಂಭವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಸ್ವರ್ಣ ಪದಕ ಪಡೆದ ವಿದ್ಯಾರ್ಥಿಗಳು, ಅವರ ಪೋಷಕರು, ಗಣ್ಯಮಾನ್ಯರು ಸೇರಿದಂತೆ ಗರಿಷ್ಟ 250 ಜನ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಗೌರವ ಡಾಕ್ಟರೇಟ್: ಈ ಬಾರಿ ದಾವಣಗೆರೆ ವಿವಿ ವತಿಯಿಂದ ಒಬ್ಬರಿಗೆ ಮಾತ್ರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಕಲಬುರಗಿಯ ಶರಣಬಸವೇಶ್ವರ ಅಪ್ಪ ಶೈಕ್ಷಣಿಕ ಸಂಸ್ಥೆಗಳ ಅಧ್ಯಕ್ಷ ಮಾತೋಶ್ರೀ ದಾಕ್ಷಾಯಿಣಿ ಅಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಒಟ್ಟು 14 ಅರ್ಜಿಗಳು ಸ್ವೀಕೃತಗೊಂಡಿದ್ದವು. ಎಲ್ಲ ಅರ್ಜಿಗಳನ್ನು ಪರಿಶೀಲನಾ ಸಮಿತಿಯು ಪರಿಶೀಲಿಸಿ, 03 ಅರ್ಜಿಗಳನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು. ಈ ಪೈಕಿ ಮಾತೋಶ್ರೀ ದಾಕ್ಷಾಯಿಣಿ ಅಪ್ಪ ಅವರಿಗೆ ಮಾತ್ರ ಗೌರವ ಡಾಕ್ಟರೇಟ್ ನೀಡಲು ರಾಜ್ಯಪಾಲರಿಂದ ಅನುಮೋದನೆ ದೊರೆತಿದೆ. ಸೆ. 30 ರಂದು ಇವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಡಾ. ಎಸ್.ವಿ. ಹಲಸೆ ಹೇಳಿದರು.

56 ಜನರಿಗೆ ಪಿಹೆಚ್‍ಡಿ ಪ್ರದಾನ: ಘಟಿಕೋತ್ಸವದಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷ ಅಭ್ಯರ್ಥಿಗಳು ಸೇರಿದಂತೆ ಒಟ್ಟು 5 ಜನರಿಗೆ ಎಂ.ಫಿಲ್, 11 ಮಹಿಳೆ ಹಾಗೂ 45 ಪುರುಷ ಅಭ್ಯರ್ಥಿಗಳು ಸೇರಿದಂತೆ ಒಟ್ಟು 56 ಅಭ್ಯರ್ಥಿಗಳಿಗೆ ಪಿಹೆಚ್‍ಡಿ ಪದವಿ ಪ್ರದಾನ ಮಾಡಲಾಗುವುದು ಎಂದರು.

ವಿನಯವತಿಗೆ 04 ಸ್ವರ್ಣ ಪದಕ: ಕಳೆದ ಮೇ 2019 ರಲ್ಲಿ ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ ದಾವಣಗೆರೆಯಲ್ಲಿ ಸ್ನಾತಕೋತ್ತರ ಕನ್ನಡ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆ.ವಿ. ವಿನಯವತಿ ವಿದ್ಯಾರ್ಥಿನಿ ಅತಿ ಹೆಚ್ಚು ಅಂಕ ಪಡೆದು 4 ಸ್ವರ್ಣ ಪದಕಗಳನ್ನು ಬಾಚಿಕೊಂಡಿದ್ದಾರೆ. ಒಟ್ಟು 62 ಸ್ವರ್ಣ ಪದಕಗಳ ಪೈಕಿ ಸ್ನಾತಕ ಪದವಿಯಲ್ಲಿ ಒಬ್ಬರು ಪುರುಷ, 8 ಮಹಿಳಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 9 ವಿದ್ಯಾರ್ಥಿಗಳು 15 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 5 ಪುರುಷ, 19 ಮಹಿಳಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ವಿದ್ಯಾರ್ಥಿಗಳು 47 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ ಎಂದು ಡಾ. ಹಲಸೆ ಅವರು ಹೇಳಿದರು.

10033 ವಿದ್ಯಾರ್ಥಿಗಳಿಗೆ ಪದವಿ: ಸ್ನಾತಕ ಹಾಗೂ ಸ್ನಾತಕೋತ್ತರ ಸೇರಿದಂತೆ ಒಟ್ಟು 10,033 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. ಬಿಎ, ಬಿಕಾಂ, ಬಿಬಿಎಂ ಸೇರಿದಂತೆ ವಿವಿಧ ಪದವಿ ವ್ಯಾಸಂಗದಲ್ಲಿ 2018-19 ನೇ ಸಾಲಿನಲ್ಲಿ 5408 ಮಹಿಳೆ, 3033 ಪುರುಷ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8441 ವಿದ್ಯಾರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿದ್ದಾರೆ. ಎಂಎ, ಎಂಕಾಂ, ಎಂಎಸ್‍ಸಿ ಸೇರಿದಂತೆ ವಿವಿಧ ಸ್ನಾತಕೋತ್ತರ ಪದವಿ ವ್ಯಾಸಂಗದಲ್ಲಿ 1073 ಮಹಿಳೆ, 519 ಪುರುಷ ವಿದ್ಯಾರ್ಥಿಗಳು ಸೇರಿದಂತೆ 1592 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲು ಅರ್ಹರಾಗಿದ್ದಾರೆ. 2018-19 ನೇ ಸಾಲಿನಲ್ಲಿ ಸ್ನಾತಕ ಪದವಿಯಲ್ಲಿ ಶೇ. 56.55 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ. 82.87 ರಷ್ಟು ಫಲಿತಾಂಶ ಬಂದಿದೆ ಎಂದರು.

5 ಹೊಸ ಕೋರ್ಸ್‍ಗಳು ಮಂಜೂರು: ದಾವಣಗೆರೆ ವಿವಿ ವ್ಯಾಪ್ತಿಗೆ 2020-21 ನೇ ಸಾಲಿಗಾಗಿ ಕೌಶಲ್ಯ ಭಾರತದಡಿ ಯುಜಿಸಿ ವತಿಯಿಂದ ಒಟ್ಟು 5 ಹೊಸ ಕೋರ್ಸ್​ಗಳು ಮಂಜೂರಾಗಿವೆ. ವಿವಿ ವತಿಯಿಂದ ಒಟ್ಟು 10 ಹೊಸ ಕೋರ್ಸ್​ಗಳ ಮಂಜೂರಾತಿಗಾಗಿ ಯುಜಿಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪೈಕಿ 5 ಕೋರ್ಸ್‍ಗಳಿಗೆ ಮಂಜೂರಾತಿ ದೊರೆತಿದೆ ಎಂದು ಮಾಹಿತಿ ನೀಡಿದರು.

Last Updated : Sep 30, 2020, 4:24 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.