ದಾವಣಗೆರೆ: ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಿದ್ರು ಸಹ ಬಿಜೆಪಿ ಕಾರ್ಯಕ್ರಮದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಂಟಿಂಗ್ಸ್ ಹಾವಳಿ ಕಂಡುಬಂತು.
ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಶಾಸಕ ಎಂ.ಪಿ.ರೇಣುಕಚಾರ್ಯ ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಪ್ಲಾಸ್ಟಿಕ್ ಹಾವಳಿ ಹೆಚ್ಚಾಗಿತ್ತು. ಇಡೀ ಹೊನ್ನಾಳಿ ಪಟ್ಟಣವನ್ನು ಪ್ಲಾಸ್ಟಿಕ್ ಮಿಶ್ರಿತ ಬಿಜೆಪಿ ಚಿನ್ಹೆಗಳ ಧ್ವಜಗಳಿಂದ ಸಿಂಗರಿಸಲಾಗಿದೆ.
ಹೊನ್ನಾಳಿಯ ಪ್ರಮುಖ ವೃತ್ತಗಳಿಗೆ ಪ್ಲಾಸ್ಟಿಕ್ ಬಂಟಿಂಗ್ಸ್ಗಳನ್ನು ಹಾಕಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.