ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆಯ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಹಾಗೂ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನೆಯನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ನೆರವೇರಿಸಿದರು.
ದಾವಣಗೆರೆಯಲ್ಲಿ 120 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ನಗರದ ಹೈಸ್ಕೂಲ್ ಮೈದಾನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಜಿಲ್ಲಾ ಉಸ್ತುವಾರಿ ಭೈರತಿ ಬಸವರಾಜ್, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹಾಜರಿದ್ದರು.