ದಾವಣಗೆರೆ : ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಿತ್ತೂರು ಗ್ರಾಮದ ಬಳಿ ಜಮೀನೊಂದರಲ್ಲಿ ನಡೆದಿದೆ. ಕೊಲೆ ಮಾಡಿ ಶವವನ್ನು ತಂದು ಜಮೀನಿನಲ್ಲಿ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಕಿತ್ತೂರು ಸುಟ್ಟ ರೀತಿಯಲ್ಲಿ ಶವ ಪತ್ತೆ : ತಲೆ ಹಾಗೂ ಮರ್ಮಾಂಗದ ಭಾಗದಲ್ಲಿ ಸುಟ್ಟಿರುವ ಗಾಯಗಳು ಕಂಡು ಬಂದಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಸುಟ್ಟಿರುವುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ಬಳಿಕವೇ ಮತ್ತಷ್ಟು ಮಾಹಿತಿ ಹೊರಬರಬೇಕಿದೆ.