ದಾವಣಗೆರೆ: ಸಾಮಾಜಿಕ ಜಾಲತಾಣಗಳಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ವಚನಾನಂದ ಸ್ವಾಮೀಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಸಿದ್ದರಾಮ ಶೆಟಗಾರ ಎಂಬುವವರು ಪೋಸ್ಟ್ ಶ್ರೀಗಳು ಹಾಗೂ ಸಮಾಜದವರ ಭಾವನೆಗೆ ಧಕ್ಕೆ ಮಾಡಿರುವ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ ದೂರು ನೀಡಿದ್ದಾರೆ.
