ಹರಿಹರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಆದೇಶದಂತೆ ಸ್ಥಾಪಿಸಲಿರುವ ಟ್ರಸ್ಟ್‌ನಲ್ಲಿ ರಾಜಕೀಯ ಪಕ್ಷಗಳ ನಾಯಕರನ್ನು ಹೊರತುಪಡಸಿ ಕೇವಲ ವಿಶ್ವ ಹಿಂದೂ ಪರಿಷತ್, ಆರ್‌ಎಸ್‌ಎಸ್ ಹಾಗೂ ಸಾಧು-ಸಂತರು ಮಾತ್ರ ಒಳಗೊಂಡಿರಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ನಗರದ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಅಯೋಧ್ಯೆ ಹೋರಾಟದ ಮಾದರಿಯಲ್ಲಿ ಕಾಶಿ ಹಾಗೂ ಮಥುರಾದಲ್ಲಿಯೂ ಮಂದಿರ ನಿರ್ಮಿಸಲೂ ಹೋರಾಟಕ್ಕೆ ರೂಪುರೇಷೆ ಸಿದ್ಧಗೊಳಿಸಬೇಕು ಎಂದು ಹೇಳಿದರು.
ಹಿಂದೂಪರ ಸಂಘಟನೆ ಹೋರಾಟದ ಫಲವಾಗಿ ಅಧಿಕಾರದ ಗದ್ದುಗೆ ಪಡೆದಿರುವ ರಾಜಕೀಯ ಪಕ್ಷಗಳು, ಹೋರಾಟಗಾರರನ್ನು ಕಡೆಗಣಿಸಿರುವುದು ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮೈಸೂರಿನ 300 ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆದಿತ್ತು. ಹಾಗೆಯೇ ಬಿಜೆಪಿ ಸರ್ಕಾರ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.