ದಾವಣಗೆರೆ : ಕ್ಷುಲ್ಲಕ ಕಾರಣಕ್ಕಾಗಿ 2 ಗುಂಪಿನ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಹೊಸಕುಂದವಾಡದಲ್ಲಿ ಕಳೆದ ರಾತ್ರಿ ನಡೆದಿದೆ.
ಯುಗಾದಿ ಹಬ್ಬದ ಹಿನ್ನೆಲೆ ಗ್ರಾಮದಲ್ಲಿ ದೇವರುಗಳ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಹೊಡೆದಾಟ ನಡೆದಿದೆ. ಘಟನೆಯಲ್ಲಿ ಪರಶುರಾಮ್ ಎಂಬಾತ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಈ ಕುರಿತು ಕಿರಣ್, ಆದಿ, ಸಚಿನ್, ಮಂಜುನಾಥ್ ಹಾಗೂ ನಾಗರಾಜ್ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ. ಕಿರಣ್ ಹಾಗೂ ನಾಗರಾಜ್ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಳಿದವರು ತಲೆ ಮರೆಸಿಕೊಂಡಿದ್ದಾರೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.