ETV Bharat / city

ಗಂಜಿ ಕೇಂದ್ರಕ್ಕೆ ಹೋದ್ರೆ ನಮ್ಮನ್ನ ಕೇಳೋರೇ ಇರೋದಿಲ್ರೀ.. ಅಳಲು ತೋಡಿಕೊಂಡ ನೆರೆ ಸಂತ್ರಸ್ತರು! - ಹೊನ್ನಾಳಿ ಹಾಗೂ ಹರಿಹರದ ನದಿ ಪಾತ್ರದಲ್ಲಿ ಪ್ರವಾಹ ಭೀತಿ

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ಹರಿಹರದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ತಲೆದೋರಿದೆ. ಹೀಗಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಹಾಗೂ ಗಂಜಿ ಕೇಂದ್ರಗಳಿಗೆ ಕಳುಹಿಸಿ ಕೊಡಲಾಗುತ್ತಿದೆ.

ತುಂಗಭದ್ರಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ
author img

By

Published : Aug 7, 2019, 8:22 PM IST

ದಾವಣಗೆರೆ: ಕಳೆದ ನಾಲ್ಕೈದು ದಿನಗಳಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಹೊನ್ನಾಳಿ ಹಾಗೂ ಹರಿಹರದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ತಲೆದೋರಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಕಾರ್ಯ ಬಿರುಸಿನಿಂದ ಸಾಗಿದೆ.

ತುಂಗಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುವ ಸಾಧ್ಯತೆ ಇರುವುದರಿಂದ ನದಿಪಾತ್ರದ ವಾಸಿಗಳಾದ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ನಿವಾಸಿಗಳ ಮನವೊಲಿಸಿ ಗಂಜಿ ಕೇಂದ್ರಗಳಿಗೆ ಕಳುಹಿಸಿ ಕೊಡಲಾಗುತ್ತಿದೆ. ಆದರೆ, ಮೊದಲು ಕೆಲವರು ಅಲ್ಲಿಗೆ ಹೋಗಲು ನಿರಾಕರಿಸಿದರು. ನಮಗೆ ಅಲ್ಲಿ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡುವುದಿಲ್ಲ ಎಂಬ ವಿಚಾರವನ್ನು ಸ್ಥಳಕ್ಕೆ ಭೇಟಿ ನೀಡಿದ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತಂದರು. ಈ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಜನರು ಆತಂಕಕ್ಕೊಳಗಾಗುವುದು ಬೇಡ ಎಂಬ ಅಭಯ ಕೊಟ್ಟ ನಂತರ ಗಂಜಿ ಕೇಂದ್ರಕ್ಕೆ ಹೋಗಲು ಸಮ್ಮತಿಸಿದರು.

ತುಂಗಭದ್ರಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ..

ನೀರಿನ ಮಟ್ಟ ಹೆಚ್ಚಾದಂತೆ ಮೊಸಳೆಗಳು ಹೊರ ಬರುತ್ತಿವೆ. ಹೊಳೆ ನೀರಿನಲ್ಲಿ ಜನರು, ಜಾನುವಾರುಗಳು ಕೊಚ್ಚಿ ಹೋಗುವ ಭಯ ಇರುವುದರಿಂದ ನದಿ ಪಾತ್ರದ ಜನರು ಗಂಜಿ ಕೇಂದ್ರಗಳಿಗೆ ಬರುವಂತೆ ರೇಣುಕಾಚಾರ್ಯ ಮನವಿ ಮಾಡಿ, ನದಿ ಪಾತ್ರದ ವಾಸಿಗಳನ್ನು ಭೇಟಿ ಮಾಡಿ ಜನರ ಅಹವಾಲು ಸ್ವೀಕರಿಸಿದರು. ಹರಿಹರ ಪಟ್ಟಣದ ಗಂಗಾನಗರದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವೂ ನಡೆಯುತ್ತಿದೆ.

ಸಾಸ್ವೆಹಳ್ಳಿ, ಚೀಲೂರು, ಅನಗವಾಡಿ, ಹೊನ್ನಾಳಿ ಪಟ್ಟಣದ ರಾಘವೇಂದ್ರ ಮಠ ಸೇರಿದಂತೆ ಹಲವೆಡೆ ಪ್ರತಿವರ್ಷವೂ ತುಂಗಭದ್ರಾ ನದಿ ಉಕ್ಕಿ ಹರಿಯುವುದರಿಂದ ಸಮಸ್ಯೆ ಎದುರಿಸುವ ಗ್ರಾಮಗಳಾಗಿವೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪರಿಣಾಮ ಬೀರದಂತೆ ತಡೆಗೋಡೆ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ 450 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆ ಕಾರ್ಯಗತಕ್ಕೆ ಬಂದರೆ ನೆರೆ ಸಮಸ್ಯೆ ಉದ್ಭವಿಸದು ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Intro:KN_DVG_07_PRAVAHA BHEETHI_SCRIPT_04_7203307

REPORTER : YOGARAJA G. H.

ತುಂಗಾ ಭದ್ರಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ - ಹೊನ್ನಾಳಿ, ಹರಿಹರ ಪಟ್ಟಣದಲ್ಲಿ ಗಂಜಿ ಕೇಂದ್ರ ಆರಂಭ - ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

ದಾವಣಗೆರೆ : ಕಳೆದ ನಾಲ್ಕೈದು ದಿನಗಳಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಹೊನ್ನಾಳಿ ಹಾಗೂ
ಹರಿಹರದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ತಲೆದೋರಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಕಾರ್ಯ ಬಿರುಸಿನಿಂದ ಸಾಗಿದೆ.

ನದಿ ಅಪಾಯ ಮಟ್ಟ ಮೀರಿ ಹರಿಯುವ ಸಾಧ್ಯತೆ ಇರುವುದರಿಂದ ನದಿಪಾತ್ರದ ವಾಸಿಗಳಾದ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ನಿವಾಸಿಗಳ ಮನವೊಲಿಸಿ ಗಂಜಿ ಕೇಂದ್ರಗಳಿಗೆ
ಕಳುಹಿಸಿಕೊಡಲಾಗುತ್ತಿದೆ. ಕೆಲವರು ಗಂಜಿ ಕೇಂದ್ರಗಳಿಗೆ ಹೋಗಲು ಒಪ್ಪಲಿಲ್ಲ.

ನಮಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡುವುದಿಲ್ಲ ಎಂಬ ವಿಚಾರವನ್ನು ಸ್ಥಳಕ್ಕೆ ಭೇಟಿ ನೀಡಿದ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಹಾಗೂ ತಾಲೂಕು ಆಡಳಿತದವರ
ಗಮನಕ್ಕೆ ತಂದರು. ಈ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಜನರು ಆತಂಕಕ್ಕೊಳಗಾಗುವುದು ಬೇಡ ಎಂಬ ಅಭಯ ಕೊಟ್ಟ ಕಾರಣಕ್ಕೆ ಗಂಜಿ
ಕೇಂದ್ರಕ್ಕೆ ಹೋಗಲು ಸಮ್ಮತಿಸಿದರು.

ಇನ್ನು ಹರಿಹರ ಪಟ್ಟಣದ ಗಂಗಾನಗರದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವೂ ನಡೆಯುತ್ತಿದೆ. ಇದೇ ರೀತಿಯಲ್ಲಿ ವರುಣನ ಆರ್ಭಟ ಮುಂದುವರಿದರೆ ತುಂಗಾಭದ್ರಾ
ನದಿ ಅಪಾಯ ಮಟ್ಟ ಮೀರಿ ಹರಿಯುವುದು ಖಚಿತ. ಹಾಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಾಂತರಿಸುವ ಕಾರ್ಯ ಸಮಾರೋಪಾದಿಯಲ್ಲಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀರಿನ ಮಟ್ಟ ಹೆಚ್ಚಾದಂತೆ ಮೊಸಳೆಗಳು ಹೊರ ಬರುತ್ತವೆ. ಹೊಳೆ ನೀರಿನಲ್ಲಿ ಜನರು, ಜಾನುವಾರುಗಳು ಕೊಚ್ಚಿ ಹೋಗುವ ಭಯ ಇರುವುದರಿಂದ ನದಿ ಪಾತ್ರದ ಜನರು ಗಂಜಿಕೇಂದ್ರಗಳಿಗೆ
ಬರುವಂತೆ ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಅದೇ ರೀತಿಯಲ್ಲಿ ನದಿ ಪಾತ್ರದ ವಾಸಿಗಳನ್ನು ಭೇಟಿ ಮಾಡಿ ಅವರು ಜನರ ಅಹವಾಲು ಸ್ವೀಕರಿಸಿದರು. ಪ್ರವಾಹ ಪರಿಸ್ಥಿತಿ ಎದುರಿಸಲು
ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸರ್ವಸನ್ನದ್ಧವಾಗಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಸಾಸ್ವೆಹಳ್ಳಿ, ಚೀಲೂರು, ಅನಗವಾಡಿ, ಹೊನ್ನಾಳಿ ಪಟ್ಟಣದ ರಾಘವೇಂದ್ರ ಮಠ ಸೇರಿದಂತೆ ಹಲವೆಡೆ ಪ್ರತಿವರ್ಷವೂ ತುಂಗಾಭದ್ರಾ ನದಿ ಉಕ್ಕಿ ಹರಿಯುವುದರಿಂದ ಸಮಸ್ಯೆ ಎದುರಿಸುವ
ಗ್ರಾಮಗಳಾಗಿವೆ. ಈ ಹಿನ್ನೆಲೆಯಲ್ಲಿ ಪ್ರವಾಹ ಆಗದಂತೆ ತಡೆಯಲು ತಡೆಗೋಡೆ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ 450 ಕೋಟಿ ರೂಪಾಯಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ಯೋಜನೆ ಕಾರ್ಯಗತಕ್ಕೆ ಬಂದರೆ ನೆರೆ ಸಮಸ್ಯೆ ಉದ್ಭವಿಸದು ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Body:KN_DVG_07_PRAVAHA BHEETHI_SCRIPT_04_7203307

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.