ETV Bharat / city

ದಾವಣಗೆರೆ: ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್.. ವಸತಿ ಶಾಲೆ ಸೀಲ್​ ಡೌನ್​

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಬಳಿ ಇರುವ ನವೋದಯ ಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ 10 ದಿನಗಳ ಕಾಲ ಶಾಲೆಯನ್ನು ಸೀಲ್​​ಡೌನ್ ಮಾಡಲಾಗಿದೆ.

Davangere Navodaya School
ದಾವಣಗೆರೆ ನವೋದಯ ವಸತಿ ಶಾಲೆ
author img

By

Published : Dec 12, 2021, 1:30 PM IST

ದಾವಣಗೆರೆ: ಚಿಕ್ಕಮಗಳೂರು ಜಿಲ್ಲೆಯ ನವೋದಯ ವಸತಿ ಶಾಲೆಯಲ್ಲಿ ಆರ್ಭಟಿಸಿದ್ದ ಕೊರೊನಾ ಮಹಾಮಾರಿ ಈಗ ದಾವಣಗೆರೆ ಜಿಲ್ಲೆಗೆ ಎಂಟ್ರಿ ಕೊಟ್ಟಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಬಳಿ ಇರುವ ನವೋದಯ ಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಕಳೆದ ಒಂದು ವಾರದಿಂದ ನಿರಂತರವಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಇಂದು ಪರೀಕ್ಷಾ ವರದಿ ಬಂದಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳ ಜತೆಗಿದ್ದ ಶಿಕ್ಷಕರು, ಸಿಬ್ಬಂದಿ ಹಾಗು ಇತರ ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಲಾಗಿದ್ದು, 25 ಜನ ಸಿಬ್ಬಂದಿ ಸೇರಿ, 550 ಮಕ್ಕಳ ಸ್ಯಾಂಪಲ್ ಸಂಗ್ರಹಿಸಲಾಗಿದೆ.

ಸೋಂಕು ದೃಢಪಟ್ಟ ಹಿನ್ನೆಲೆ, 10 ದಿನಗಳ ಕಾಲ ಶಾಲೆಯನ್ನು ಸೀಲ್​​ಡೌನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ನಾಲ್ವರು ವಿದ್ಯಾರ್ಥಿಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಅರೋಗ್ಯವಾಗಿದ್ದು, ಯಾವುದೇ ಕೋವಿಡ್ ಲಕ್ಷಣ ಕಂಡು ಬಂದಿಲ್ಲ.

ಹೆಚ್ಚಿನ ಟೆಸ್ಟ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ನವೋದಯ ಶಾಲಾ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಡಳಿತದಿಂದ ಈವರೆಗೆ ಒಟ್ಟು 4,882 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, 3667 ವರದಿಗಳು ನೆಗೆಟಿವ್ ಬಂದಿವೆ. ಉಳಿದ 1,215 ವರದಿಗಳಿಗಾಗಿ ಜಿಲ್ಲಾಡಳಿತ ಕಾದು ಕುಳಿತಿದೆ. ಈ ಸಂಬಂಧ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: Omicron Fear: ಆಂಧ್ರದಲ್ಲಿ ಒಮಿಕ್ರಾನ್ ಮೊದಲ ಪ್ರಕರಣ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.