ದಾವಣಗೆರೆ : ಹೈಕೋರ್ಟ್ ಮಧ್ಯಂತರ ಆದೇಶದ ನಡುವೆ ರಾಜ್ಯ ಸರ್ಕಾರ ಇಂದಿನಿಂದ 9 ಹಾಗೂ 10ನೇ ತರಗತಿ ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಮಕ್ಕಳು ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.
ದಾವಣಗೆರೆಯ ಸೀತಮ್ಮ ಶಾಲೆಯಲ್ಲಿ ಬಹುತೇಕ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದರು. ಶಾಲಾ ಶಿಕ್ಷಕರು ಗೇಟ್ನಲ್ಲಿಯೇ ನಿಂತು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಹೋಗುವಂತಿಲ್ಲ ಎಂದು ಸೂಚಿಸಿದ್ದಾರೆ. ಶಿಕ್ಷಕರ ಸೂಚನೆಯಂತೆ ಹಿಜಾಬ್ ಕಳಚಿಟ್ಟು ನಂತರ ವಿದ್ಯಾರ್ಥಿನಿಯರು ಸಮವಸ್ತ್ರದಲ್ಲಿ ತರಗತಿಗೆ ತೆರಳಿದ್ದಾರೆ.
ನಗರದ ರಾಜನಹಳ್ಳಿ ಸೀತಮ್ಮ ಸರ್ಕಾರಿ ಪ್ರೌಢಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಗೂ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಕ್ಲಾಸ್ಗೆ ಎಂಟ್ರಿ: ಎಚ್ಚೆತ್ತು ಹಿಜಾಬ್ ತೆಗೆಸಿದ ಶಿಕ್ಷಕರು