ದಾವಣಗೆರೆ: ಹೈದರಾಬಾದ್ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಎಐಡಿಎಸ್ಓ ಹಾಗೂ ಎಐಡಿವೈಓ ವಿದ್ಯಾರ್ಥಿ ಸಂಘಟನೆ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದವು.
ದಾವಣಗೆರೆಯಲ್ಲಿ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಗರದ ಗಾಂಧಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಂಘಟನೆ ಸದಸ್ಯರು, ಇಂದು ದೇಶಾದ್ಯಂತ ಮಹಿಳೆಯರು, ಮಕ್ಕಳು ಎನ್ನದೆ ಎಲ್ಲರ ಮೇಲೆ ಪೈಶಾಚಿಕ ಕೃತ್ಯ ನಡೆಯುತ್ತಿದೆ. ಈ ಬಗ್ಗೆ ರಾಜಕೀಯ ನಾಯಕರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಲ್ಲದೆ ದಿನದಿಂದ ದಿನಕ್ಕೆ ಕೃತ್ಯಗಳು ಹೆಚ್ಚಾಗುತ್ತಿದ್ರೂ ಕೇಂದ್ರ ಸರ್ಕಾರ ಮಾತ್ರ ಮೌನ ವಹಿಸಿದೆ. ಇದರಿಂದ ದೇಶದಲ್ಲಿ ಅಶಾಂತಿ ನಿರ್ಮಾಣವಾಗಿದ್ದು, ಕಾಮುಕರು ನಿರ್ಭೀತಿಯಿಂದ ಓಡಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರ ಅಶ್ಲೀಲ ಚಿತ್ರ-ಸಾಹಿತ್ಯಕ್ಕೆ ಪ್ರೋತ್ಸಾಹಿಸುತ್ತಿದೆ. ಇದರಿಂದ ಯುವ ಸಮೂಹ ದಾರಿ ತಪ್ಪುತ್ತಿದೆ. ಆದ್ದರಿಂದ ಅಶ್ಲೀಲ ಚಿತ್ರಗಳ ವೆಬ್ಸೈಟ್ ನಿಷೇಧಿಸಬೇಕು. ಈ ಕೂಡಲೇ ಕಾಮುಕರ ಅಟ್ಟಹಾಸ ನಿಲ್ಲಬೇಕು. ಸರ್ಕಾರಗಳು ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.