ದಾವಣಗೆರೆ: ಪಕ್ಷವನ್ನು ಮುಂದೆ ಅಧಿಕಾರಕ್ಕೆ ತರುವ ದೃಷ್ಠಿಯಿಂದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲ ಕಡೆ ಸಂಚರಿಸಿ 130 ರಿಂದ 140 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ನನ್ನ ಪ್ರವಾಸ ಈಗಾಗಲೇ ಪ್ರಾರಂಭವಾಗಿದೆ. ಮೈಸೂರು ಭಾಗಕ್ಕೆ ಹೋಗಿ ಬಂದಿದ್ದೇನೆ. ನಿರಂತರವಾಗಿ ಓಡಾಡುತ್ತಿದ್ದೇನೆ. ಸಮಸ್ಯೆ ಏನೂ ಇಲ್ಲ. ರಾಜ್ಯದಲ್ಲಿ ನಾನೇ ಆಗಲಿ, ರಾಜ್ಯಾಧ್ಯಕ್ಷರಾಗಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನು ಬಲಿಷ್ಠ ಗೊಳಿಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದರು.
ಇಂದಿನ ಕಾರ್ಯಕಾರಣಿ ಸಭೆಯಲ್ಲಿ ಕುಳಿತು ಈ ಬಗ್ಗೆ ಚರ್ಚೆ ಮಾಡುತ್ತೇವೆ. ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕೂಡ ಬಂದಿದ್ದಾರೆ. ಮುಂದೆ ಪಕ್ಷ ಸಂಘಟನೆ, ಬಲಪಡಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ಎಂಪಿ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ:
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂಪಿ ರೇಣುಕಾಚಾರ್ಯ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದರು. ಶಿವಮೊಗ್ಗದಿಂದ ದಾವಣಗೆರೆಗೆ ಬರುವಾಗ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿದ್ರು. ಬಳಿಕ ಎಪಿಎಂಸಿ ಆವರಣದಲ್ಲಿ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದರು. ಯಡಿಯೂರಪ್ಪ ಅವರಿಗೆ ಶಾಸಕ ಎಂಪಿ ರೇಣುಕಾಚಾರ್ಯ ಸಾಥ್ ನೀಡಿದರು.
ಇದನ್ನೂ ಓದಿ: ಯಾವುದೋ ಒಂದು ತಪ್ಪಿಗೆ ಸಿದ್ದರಾಮಯ್ಯರಿಂದ ಪಾಠ ಕಲಿಯುವ ಅಗತ್ಯವಿಲ್ಲ: ಕಟೀಲ್ ತಿರುಗೇಟು