ದಾವಣಗೆರೆ: ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟವನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಈಗ ಎಸ್ಟಿ ಸಮಾಜದ ತಳವಾರ ಪರಿವಾರ ಮೀಸಲಾತಿ ನೀಡಲು ಸರ್ಕಾರ ಆದೇಶ ಮಾಡಿದೆ. ಆದ್ರೆ ನಮಗೆ ಮಾತ್ರ ಮೀಸಲಾತಿ ಸಿಗುತ್ತಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಇದೇ ಕಾರಣಕ್ಕಾಗಿ ಫೆಬ್ರವರಿ 2 ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಇದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಪ್ರಮುಖರು ರಾಜಕೀಯ ನಾಯಕರು ಪಾಲ್ಗೊಳ್ಳಲ್ಲಿದ್ದಾರೆ. ಈ ಸಭೆಯಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಚಿವ ನಿರಾಣಿ ಬಗ್ಗೆ ಮಾತಾಡಲ್ಲ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗುವ ಕಾಲ ಬಂದಿದೆ. ಇದರ ಕ್ರೆಡಿಟ್ ಪಡೆಯಲು ಕೆಲವು ಜನರು ಹುನ್ನಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಮಾತಾಡಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೆಸರೇಳದೇ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ನನಗೆ ಗೊತ್ತಿರುವುದು ಒಂದೇ ಪಂಚಮಸಾಲಿ ಪೀಠ. ಅದು ಕೂಡಲ ಸಂಗಮಪೀಠ. ಬೇರೆ ಪೀಠಗಳ ಬಗ್ಗೆ ಗೊತ್ತಿಲ್ಲ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ