ದಾವಣಗೆರೆ: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ವಿರೋಧಿಸಿ ನಗರದಲ್ಲಿ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಎಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ನೀತಿಗಳನ್ನ ಜಾರಿಗೊಳಿಸುವ ಮೂಲಕ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀಮಂತರಿಗೆ ಅನುಕೂಲವಾಗುವಂತ ಕಾಯ್ದೆಗಳನ್ನು ಸರ್ಕಾರ ಜಾರಿಗೆ ತರಲು ಮುಂದಾಗುತ್ತಿರುವುದು ದುರಂತ. ರಾಜ್ಯ ಸರ್ಕಾರ ಕೂಡಲೇ ಜನ ವಿರೋಧಿ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.