ETV Bharat / city

ಹೊರಗುತ್ತಿಗೆ ನೌಕರರನ್ನು ಕೆಲಸದಿಂದ‌ ಕೈ ಬಿಡುವ ನಿರ್ಧಾರ.. ಕೊರೊನಾ ವಾರಿಯರ್ಸ್ ಬದುಕು ಅತಂತ್ರ! - davanagere health department worker

ಜಿಲ್ಲಾ ಆರೋಗ್ಯ ಇಲಾಖೆ ಇದೇ ಮಾರ್ಚ್ 30ರಂದು ಸುಮಾರು 180 ಹೊರಗುತ್ತಿಗೆ ನೌಕರರನ್ನು ಕೆಲಸದಿಂದ‌ ಕೈ ಬಿಡುವುದಾಗಿ ಆದೇಶ ಹೊರಡಿಸಿದೆ. ಇದರಿಂದಾಗಿ 180 ಸಿಬ್ಬಂದಿಗಳ ಬದುಕು ಅತಂತ್ರವಾಗಿದೆ.

Job loss fear for health department Outsourcing employee
ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಕೊರೊನಾ ವಾರಿಯರ್ಸ್
author img

By

Published : Mar 17, 2022, 11:06 AM IST

ದಾವಣಗೆರೆ: ಕೋವಿಡ್​ ಉಲ್ಭಣಗೊಂಡಿದ್ದ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿ ಸೇವೆ ಮರೆಯುವಂತಿಲ್ಲ. ಸಾವಿರಾರು ರೋಗಿಗಳನ್ನು ಗುಣಪಡಿಸಿ ಧೈರ್ಯ ತುಂಬಿ ಕಳುಹಿಸಿದ್ದ ಕೊರೊನಾ ವಾರಿಯರ್ಸ್ ಪರಿಸ್ಥಿತಿ ಈಗ ಹೇಳ ತೀರದಂತಾಗಿದೆ. ಹೌದು, ಜಿಲ್ಲಾ ಆರೋಗ್ಯ ಇಲಾಖೆ ಇದೇ ಮಾರ್ಚ್ 30ರಂದು ಸುಮಾರು 180 ಹೊರಗುತ್ತಿಗೆ ನೌಕರರನ್ನು ಕೆಲಸದಿಂದ‌ ಕೈ ಬಿಡುವುದಾಗಿ ಆದೇಶ ಹೊರಡಿಸಿದೆ. ಇದರಿಂದಾಗಿ 180 ಸಿಬ್ಬಂದಿಗಳ ಬದುಕು ಅತಂತ್ರವಾಗಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಟೊಂಕ ಕಟ್ಟಿ ನಿಂತಿದ್ದ ಕೆಲ ಕೊರೊನಾ ವಾರಿಯರ್ಸ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆ ಕೆಲಸದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದೆ. ದಾವಣಗೆರೆಯ ಜಿಲ್ಲಾ ಆರೋಗ್ಯ ಇಲಾಖೆ ಅಧೀನದಲ್ಲಿ ಕೋವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸಿದ್ದ ಆರೋಗ್ಯ ಸಿಬ್ಬಂದಿಗಳು ಈಗ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಕೊರೊನಾ ವಾರಿಯರ್ಸ್

ಕೋವಿಡ್​ ಉಲ್ಭಣಗೊಂಡ ವೇಳೆ ರಾಜ್ಯದ ಎಲ್ಲ ಕಡೆಗಳಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆ ಇದ್ದ ಕಾರಣ ಐದು ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ಆರೋಗ್ಯ ಇಲಾಖೆ ನೇಮಕ ಮಾಡಿಕೊಂಡಿತ್ತು, ಅದರಲ್ಲಿ ‌ಕೆಲವರನ್ನು ಮುಂದುವರೆಸುವುದಾಗಿ ಕೂಡ ಹೇಳಲಾಗಿತ್ತು. ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿದ್ದರಿಂದ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡಿದ್ದ ನೌಕರರನ್ನು ಕೆಲಸ‌ದಿಂದ ತೆಗೆಯಲು ಚಿಂತಿಸಲಾಗಿದೆ.

ಇದನ್ನೂ ಓದಿ: ಜೇಮ್ಸ್ ಚಿತ್ರದ ನೆನಪಿಗಾಗಿ ಅಭಿಮಾನಿಗಳಿಂದ ಕೀ ಚೈನ್ ವಿತರಣೆ

ಈ ಹಿನ್ನೆಲೆ, ಕೋವಿಡ್ ಎರಡು ಹಾಗೂ ಮೂರನೇ ಅಲೆಯ ತುರ್ತು ಸಂದರ್ಭದಲ್ಲಿ ಆಯ್ಕೆಯಾಗಿ ಸಾರ್ವಜನಿಕರ ಸೇವೆ ಮಾಡುತ್ತಿರುವ ಎಲ್ಲ ಕೊರೊನಾ ವಾರಿಯರ್​ಗಳನ್ನು ಸೇವೆಯಲ್ಲಿ ಮುಂದುವರಿಸುವಂತೆ ಕೊರೊನಾ ವಾರಿಯರ್ಸ್​ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೆಲಸ‌ದಿಂದ ಕೈ ಬಿಟ್ಟರೆ ನಮ್ಮ ಕುಟುಂಬಗಳು ಬೀದಿ ಪಾಲಾಗುತ್ತವೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಅಲ್ಲದೇ ಬಾಕಿ ವೇತನ ಹಾಗೂ ಪ್ರೋತ್ಸಾಹ ಧನವನ್ನು ಸಹ ಈ ಕೂಡಲೇ ಬಿಡುಗಡೆ ಮಾಡಬೇಕು.‌ ಈಗಾಗಲೇ ಬಹುತೇಕ ಕಡೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಅಲ್ಲಿ ನಮ್ಮನ್ನು ನೇಮಿಸಿ ಮುಂದುವರಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.