ದಾವಣಗೆರೆ: ಸ್ಪರ್ಧಾ ವಿಜೇತ ವತಿಯಿಂದ ಜನವರಿ 19ರಿಂದ ಕೆಎಎಸ್, ಎಫ್ಡಿಎ, ಪಿಡಿಒ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು 15 ದಿನಗಳ ಕಾಲ ನಡೆಸಲಾಗುವುದು ಎಂದು ಆಯೋಜಕ ರಂಗನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಷ್ಠಿತ ಪರೀಕ್ಷಾ ತರಬೇತಿ ಕೇಂದ್ರಗಳಲ್ಲಿ ಒಂದಾದ ಬೆಂಗಳೂರಿನ ಸ್ಪರ್ಧಾ ವಿಜೇತ ಕರಿಯರ್ ಅಕಾಡೆಮಿ ನಿರ್ದೇಶಕ ಡಾ.ಕೆ.ಎಂ.ಸುರೇಶ್ ಅವರು ವಿಶೇಷ ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. 15 ದಿನ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲು ಆಗಮಿಸಲಿದ್ದಾರೆ ಎಂದು ಹೇಳಿದರು.