ದಾವಣಗೆರೆ: ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಇದರಿಂದ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲಾಪುರ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಚೀಲಾಪುರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಜನರಿಗೆ ಆತಂಕ ಉಂಟುಮಾಡಿತ್ತು. ಹಸು, ಮೇಕೆ, ಆಡುಗಳನ್ನು ಬೇಟೆಯಾಡುತ್ತಿತ್ತು. ಚಿರತೆ ಉಪಟಳಕ್ಕೆ ಬೆಚ್ಚಿಬಿದ್ದಿದ್ದ ಜನ ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಇಂದು ಬೆಳಿಗ್ಗೆ ಚಿರತೆ ಸೆರೆಯಾಗಿದೆ. ಚಿರತೆ ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಸಾಗಿಸಲಾಗಿದೆ. ಇದನ್ನು ನೋಡಲು ಜನಸಾಗರವೇ ಹರಿದು ಬಂದಿತ್ತು.